ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ
ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ, (ಮೇ. 15): ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಕುರಿತು 10 ದಿನಗಳ ಉಚಿತ ತರಬೇತಿಯ ಅರ್ಜಿ ಆಹ್ವಾನಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

politics

HL

economy

HL

economy

HL

economy

HL

crime

HL

others

HL

others

HL

others

HL

others

HL

others

HL

politics

HL

others

HL

sports

HL

others

HL

others

HL

education

HL

politics

HL

economy

HL

politics

HL

sports

HL

others

HL

economy

HL

others

HL

others

HL

crime

HL

education

HL

others

HL

politics