ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರುವ ಸಾರಿಗೆ ಬಸ್ಸುಗಳು.. ದೊಡ್ಡಬಳ್ಳಾಪುರದ ಕಾಲೇಜುಗಳಿಗೆ ತೆರಳಲಾಗದೆ ವಿದ್ಯಾರ್ಥಿಗಳ ಪರದಾಟ
ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರುವ ಸಾರಿಗೆ ಬಸ್ಸುಗಳು.. ದೊಡ್ಡಬಳ್ಳಾಪುರದ ಕಾಲೇಜುಗಳಿಗೆ ತೆರಳಲಾಗದೆ ವಿದ್ಯಾರ್ಥಿಗಳ ಪರದಾಟ

ದೊಡ್ಡಬಳ್ಳಾಪುರ, (ಮೇ.22); ತಾಲೂಕಿನಲ್ಲಿ ಸಾರಿಗೆ ಅವ್ಯವಸ್ಥೆಯಿಂದಾಗಿ ಪ್ರಯಾಣಿಕರು ವಿದ್ಯಾರ್ಥಿಗಳು ಪದೇ ಪದೇ ತೊಂದರೆ ಅನುಭವಿಸುತ್ತಿದ್ದರು, ಸೂಕ್ತ ಕ್ರಮಕೈಗೊಳ್ಳಬೇಕಾದ ಅಧಿಕಾರಿಗಳು, ಜನ ಪ್ರತಿನಿಧಿಗಳು ಮೌನಕ್ಕೆ ಶರಣಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ತಾಲೂಕಿನ ಕೊಟ್ಟಿಗೆ ಮಾಚೇನಹಳ್ಳಿ ಹಾಗೂ ಹೊಸಹಳ್ಳಿಯಿಂದ ಶಾಲಾ ವಿದ್ಯಾರ್ಥಿಗಳನ್ನು ದೊಡ್ಡಬಳ್ಳಾಪುರಕ್ಕೆ ಹೊತ್ತು ತರುತ್ತಿದ್ದ ಎರಡು ಕೆಎಸ್ಆರ್ ಟಿಸಿ‌ ಬಸ್ಸುಗಳು ನಡು ರಸ್ತೆಯಲ್ಲಿ ಕೆಟ್ಟು ನಿಂತ ಪರಿಣಾಮ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಇತರೆ ಪ್ರಯಾಣಿಕರು ಪರದಾಡುವಂತಾಗಿತ್ತು.

ಹಳೆಯ ಬಸ್‌ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರುವುದರಿಂದ ವಿದ್ಯಾರ್ಥಿಗಳು ಹೊತ್ತಲ್ಲದ ಹೊತ್ತಿಗೆ ಶಾಲಾ ಕಾಲೇಜುಗಳಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯ ಸರ್ಕಾರ ಪ್ರತಿ ಗ್ರಾಮಗಳಿಗೆ ಬಸ್‌ಗಳ ಸೌಕರ್ಯ ಕಲ್ಪಿಸಬೇಕು ಮತ್ತು ವಿದ್ಯಾರ್ಥಿಗಳು ಸಕಾಲಕ್ಕೆ ಶಾಲಾ-ಕಾಲೇಜುಗಳಿಗೆ ತೆರಳಲು ಅನುಕೂಲವಾಗಬೇಕೆಂಬ ಉದ್ದೇಶದಿಂದ ಸಾರಿಗೆ ಸಂಚಾರಕ್ಕಾಗಿ ಲಕ್ಷಾಂತರ ರೂ.ಖರ್ಚು ಮಾಡುತ್ತಿದೆ ಆದರೆ ಸೂಕ್ತ ನಿರ್ವಹಣೆ ಇಲ್ಲದೆ ವಿದ್ಯಾರ್ಥಿಗಳು, ಪ್ರಯಾಣಿಕರು ಸಮಸ್ಯೆಗೆ ಸಿಲುಕುತ್ತಿದ್ದಾರೆ‌.

ಬಸ್ ಘಟಕಗಳಲ್ಲಿ ನಿಲ್ಲಿಸಲಾದ ಹಳೆಯ ಬಸ್‌ಗಳನ್ನು ಹಳ್ಳಿಗಳ ಮಾರ್ಗಕ್ಕೆ ಬಿಡಲಾಗುತ್ತಿದೆ ಎಂಬ ಆರೋಪ ವ್ಯಾಪಕವಾಗಿದೆ. ಇದರಿಂದ ಬಸ್‌ಗಳು ಎಲ್ಲೆಂದರಲ್ಲಿ ಕೆಟ್ಟು ಹೋಗುತ್ತಿದ್ದು, ಮಹಿಳಾ ಪ್ರಯಾಣಿಕರು, ಮಕ್ಕಳು, ವಿದ್ಯಾರ್ಥಿಗಳು ಅರಣ್ಯ ಪ್ರದೇಶದಲ್ಲಿ ಗಂಟೆಗಟ್ಟಲೆ ಕಾದು ಖಾಸಗಿ ವಾಹನದಲ್ಲಿ ತೆರಳುವ ಅನಿವಾರ್ಯತೆ ಸೃಷ್ಟಿಯಾಗುತ್ತಿದೆ.

ಹಳ್ಳಿಗಳಿಗೆ ಬರುವ ಬಹುತೇಕ ಬಸ್‌ಗಳು ಹಳೆಯದ್ದಾಗಿದ್ದು, ಸಂಚಾರಕ್ಕೆ ಯೋಗ್ಯವಾಗಿಲ್ಲ. ಆದರೂ ಗ್ರಾಮೀಣ ಪ್ರದೇಶಗಳಿಗೆ ಡಕೋಟಾ ಬಸ್‌ಗಳನ್ನು ಓಡಿಸಲಾಗುತ್ತಿದೆ. ಆದ್ದರಿಂದ ಕೂಡಲೇ ಹೊಸ ಬಸ್‌ಗಳನ್ನು ಹಳ್ಳಿಗಳಿಗೆ ಓಡಿಸಲು ಸಾರಿಗೆ ಸಂಸ್ಥೆ ಅಧಿಕಾರಿಗಳು, ಚುನಾಯಿತ ಜನ ಪ್ರತಿನಿಧಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime