ಗಿರಗಿರನೆ ತಿರುಗಿದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ.. ಯಾತ್ರಾರ್ಥಿಗಳು ಪಾರು..!| ವಿಡಿಯೋ ನೋಡಿ
ಗಿರಗಿರನೆ ತಿರುಗಿದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ.. ಯಾತ್ರಾರ್ಥಿಗಳು ಪಾರು..!| ವಿಡಿಯೋ ನೋಡಿ

ಡೆಹ್ರಾಡೂನ್, (ಮೇ.24); ಕೇದಾರನಾಥ ಹೆಲಿಪ್ಯಾಡ್‌ನಿಂದ ಸುಮಾರು 100 ಮೀಟರ್ ದೂರದಲ್ಲೇ ತಾಂತ್ರಿಕ ದೋಷದಿಂದಾಗಿ 7 ಮಂದಿಯನ್ನು ಹೊತ್ತ ಹೆಲಿಕಾಪ್ಟ‌ರ್, ಗಿರಗಿರನೆ ತಿರುಗಿ ತುರ್ತು ಭೂಸ್ಪರ್ಶಗೈದ ಘಟನೆ ನಡೆದಿದೆ.

ಹೆಲಿಕಾಪ್ಟ‌ರ್‌ನಲ್ಲಿದ್ದ 6 ಪ್ರಯಾಣಿಕರು ಮತ್ತು ಪೈಲಟ್ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

ಇದ್ದಕ್ಕಿದ್ದ ಹಾಗೆ ತಾಂತ್ರಿಕ ಅಡಚಣೆ ಉಂಟಾದ ಪರಿಣಾಮ ಕೇದಾರನಾಥದ ಹೆಲಿಪ್ಯಾಡ್‌ನಿಂದ ಕೆಲವು ಮೀಟರ್‌ಗಳ ದೂರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

ಇಂದು ಮುಂಜಾನೆ 7 ಗಂಟೆ ಸುಮಾರಿಗೆ ಲ್ಯಾಂಡಿಂಗ್ ಮಾಡುವ ಮೊದಲು ಹೆಲಿಕಾಪ್ಟರ್ ಗಿರಗಿರನೆ ತಿರುಗಿತು. ಈ ವೇಳೆ ಹೆಲಿಪ್ಯಾಡ್‌ನಲ್ಲಿ ನಿಂತಿದ್ದ ಸಿಬ್ಬಂದಿ ಹೆದರಿ ಹಿಂದಕ್ಕೆ ಓಡುತ್ತಿರುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ.

ಹೆಲಿಕಾಪ್ಟರ್‌ ಸಿರ್ಸಿ ಹೆಲಿಪ್ಯಾಡ್‌ನಿಂದ ಕೇದಾರನಾಥಕ್ಕೆ ಟೇಕಾಫ್‌ ಆಗಿತ್ತು. ಮಾರ್ಗ ಮಧ್ಯದಲ್ಲಿ ತಾಂತ್ರಿಕ ಅಡಚಣೆ ಉಂಟಾಗಿದ್ದು, ಪೈಲಟ್‌ ತೆಗೆದುಕೊಂಡ ತ್ವರಿತ ನಿರ್ಧಾರದಿಂದಾಗಿ ದೊಡ್ಡ ಅನಾಹುತ ತಪ್ಪಿದೆ. 

ಯಾತ್ರಾರ್ಥಿಗಳು ದೇವರ ದರ್ಶನ ಪಡೆದ ನಂತರ ಹಿಂತಿರುಗಲಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ರುದ್ರಪ್ರಯಾಗದ ಜಿಲ್ಲಾ ಮ್ಯಾಜಿಸ್ಟ್ರೇಟ್ ಸೌರಭ್ ಗಹರ್ವಾರ್ ಹೇಳಿದ್ದಾರೆ. 

ಘಟನೆಯ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime