ಮನವಿಗೆ ಸ್ಪಂದನೆ: ದೊಡ್ಡಬಳ್ಳಾಪುರಕ್ಕೆರಡು KSRTC ಬಸ್ ಮಂಜೂರು ಮಾಡಿದ ಸಚಿವ ರಾಮಲಿಂಗಾ ರೆಡ್ಡಿ..!
ಮನವಿಗೆ ಸ್ಪಂದನೆ: ದೊಡ್ಡಬಳ್ಳಾಪುರಕ್ಕೆರಡು KSRTC ಬಸ್ ಮಂಜೂರು ಮಾಡಿದ ಸಚಿವ ರಾಮಲಿಂಗಾ ರೆಡ್ಡಿ..!

ದೊಡ್ಡಬಳ್ಳಾಪುರ, (ಜೂ.22): ಸಾರಿಗೆ ಅವ್ಯವಸ್ಥೆ ತಪ್ಪಿಸುವಂತೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮಾಡಲಾಗಿದ್ದ ಮನವಿಗೆ ಸಚಿವರು ಸ್ಪಂದಿಸಿದ್ದು, ದೊಡ್ಡಬಳ್ಳಾಪುರ - ಬೆಂಗಳೂರು ನಡುವೆ ಸಂಚರಿಸಲು ಪ್ರಯಾಣಿಕರಿಗೆ ಅನುಕೂಲವಾಗುವಂತೆ ಎರಡು ನೂತನ ಬಸ್ ಮಂಜೂರು ಮಾಡಿದ್ದಾರೆಂದು ತಿಳಿದು ಬಂದಿದೆ.

ಈ ಕುರಿತು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದು, ಇಂದು ಅಥವಾ ನಾಳೆಯ ಒಳಗಾಗಿ ಎರಡು ಬಸ್ಸುಗಳು ನಗರದ ಕೆಎಸ್‌ಆರ್‌ಟಿಸಿ ಡಿಪೋಗೆ ಬರಲಿವೆ ಎಂದು ಖಚಿತಪಡಿಸಿದ್ದಾರೆ.

ಸಾರಿಗೆ ಅವ್ಯವಸ್ಥೆ ಹಿನ್ನೆಲೆಯಲ್ಲಿ ಇತ್ತೀಚೆಗೆ ನಗರದ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು, ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದರು. ಪ್ರತಿ ನಿತ್ಯ ಅಸಮರ್ಪಕ ನಿರ್ವಹಣೆ ಕಾರಣ ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಸಾರಿಗೆ ಅವ್ಯವಸ್ಥೆ ಉಂಟಾಗುತ್ತಿದ್ದು, ವಿದ್ಯಾರ್ಥಿಗಳು, ಉದ್ಯೋಗಿಗಳು, ಪ್ರಯಾಣಿಕರು ಪರದಾಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ಜೂನ್ 20ರಂದು ಕೋರಮಂಗಲದ ಬಿಬಿಎಂಪಿ ಕಚೇರಿಯಲ್ಲಿ  ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಯಾದ ಪ್ರಯಾಣಿಕರಾದ ವಿನೋದ್ ಕುಮಾರ್, ಮಂಜುನಾಥ್, ಚಂದ್ರ ಮಂಚನಬೆಲೆ, ಸಚಿನ್, ಮಂಜು ಆರ್, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಉಂಟಾಗಿರುವ ಸಾರಿಗೆ ಅವ್ಯವಸ್ಥೆ ಕುರಿತು ವಿವರಿಸಿದ್ದರು.

ದೊಡ್ಡಬಳ್ಳಾಪುರವು ಬೆಂಗಳೂರು ನಗರದಿಂದ ಸುಮಾರು 38 ಕಿ.ಮೀ. ಗಳ ದೂರದಲ್ಲಿದ್ದು, ದೊಡ್ಡಬಳ್ಳಾಪುರದ ನಾಗರಿಕರು ಬೆಂಗಳೂರಿಗೆ ಬಂದು ಹೋಗಲು ಪರದಾಡುವ ಪರಿಸ್ಥಿತಿಯು ತುಂಬಾ ವರ್ಷಗಳಿಂದಲೂ ಇದೆ. ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ.

ಯಾವುದೇ ಸರ್ಕಾರ ಮತ್ತು ಶಾಸಕರು ಬಂದರೂ ಸಹ ಈ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲದ ಕಾರಣ ನಾವು ತಮ್ಮ ಮೇಲಿನ ನಂಬಿಕೆ ಹಾಗೂ ವಿಶ್ವಾಸದಿಂದ ಮನವಿಯನ್ನು ಸಲ್ಲಿಸುತ್ತಿದ್ದೇವೆ.

ಈ ಮೊದಲು ಭಾಗಮಂಡಲ, ಲಕ್ಷೇಶ್ವರ ನಂದಿಬೆಟ್ಟ ಮತ್ತು ಇತರೆ ಕೆಲವು ಜಿಲ್ಲೆಗಳಿಗೆ ಹೋಗುತ್ತಿದ್ದ ಬಸ್ಸುಗಳನ್ನು ಈ ಹಿಂದೆ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮ್ಯಾನೇಜರ್ ರದ್ದು ಮಾಡಿರುತ್ತಾರೆ. ಹಾಗೂ ಈ ಹಿಂದೆ ಕಾವೇರಿ ಭವನ, ಬೆಂಗಳೂರು, ದೊಡ್ಡಬಳ್ಳಾಪುರ ನಡುವೆ ಸಂಚರಿಸಲು ಸುಮಾರು 15-20ರಷ್ಟು ಕೆ.ಎಸ್.ಆರ್.ಟಿ.ಸಿ. ಬಸ್ಸುಗಳು ಇನ್ನು, ಈಗ ಅವು ಕೇವಲ 3-4ಕ್ಕೆ ಇಳಿದಿವೆ. 

ಪ್ರತಿ ದಿನ ಸಾವಿರಾರು ಜನರು ಬೆಂಗಳೂರಿಗೆ ಬಂದು ಹೋಗುವವರಿದ್ದು, ಅವರುಗಳಲ್ಲಿ ಹೆಚ್ಚಾಗಿ ಮಾನ್ಯ ನ್ಯಾಯಾಲಯ, ಸರ್ಕಾರಿ ಕಛೇರಿ, ಶಾಲಾ- ಕಾಲೇಜುಗಳಿಗೆ, ಆಸ್ಪತ್ರಗಳಿಗೆ ಹಾಗೂ ಖಾಸಗಿ ಕಂಪನಿಗಳಿಗೆ ಹೋಗುವ ಉದ್ಯೋಗಿಗಳು, ವ್ಯಾಪಾರಸ್ಥರು, ಅವೆನ್ಯೂ ರೋಡ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರ ನಡೆಸುತ್ತಿರುವವರರಿದ್ದು, ಸದರಿಯವರುಗಳು ಸಮಯಕ್ಕೆ ಸರಿಯಾಗಿ ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಹೋಗಲು ಹಾಗೂ ಬರಲು ತುಂಬಾ ಕಷ್ಟಕರವಾಗಿರುತ್ತದೆ.

ದೊಡ್ಡಬಳ್ಳಾಪುರ-ಕಾವೇರಿ ಭವನ ಮಾರ್ಗವಾಗಿ ಬಸ್ಸುಗಳ ಸಂಚಾರ ಇದ್ದು, ಆದರೆ, ಪ್ರಸ್ತುತ ಸಮಯಕ್ಕೆ ಸರಿಯಾರಿ ಬಸ್ಸುಗಳು ಇಲ್ಲದೆ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ.

ಈ ಬಗ್ಗೆ ಕೆ.ಎಸ್.ಆರ್.ಟಿ.ಸಿ.ಯ ಸಿಬ್ಬಂದಿಗಳನ್ನು ವಿಚಾರಿಸಲಾಗಿ, ಚಿಕ್ಕಬಳಾಪುರ ವಿಭಾಗಕ್ಕೆ ಸದರಿ ದೊಡ್ಡಬಳ್ಳಾಪುರ ಡಿಪೋ ಸೇರಿದ್ದು, ಅಲ್ಲಿಂದ ಸರಿಯಾಗಿ ಯಾವುದೇ ಬಸ್ಸುಗಳ ಸೇವೆ ಹಾಗೂ ಬಸ್ಸುಗಳಿಗೆ ಬೇಕಾಗುವ ಬಿಡಿ ಭಾಗಗಳು ಸರಿಯಾಗಿ ವಿತರಿಸದೇ ಇರುವುದೇ ಕಾರಣವೆಂದು ತಿಳಿಸಿರುತ್ತಾರೆ.

ಆದ್ದರಿಂದ, ಬೆಂಗಳೂರಿನ ಕೇಂದ್ರ ವಿಭಾಗಕ್ಕೆ ದೊಡ್ಡಬಳ್ಳಾಪುರ ಡಿಪೋ ಸೇರಿದ್ದು ಈಗ ಮತ್ತೆ ಚಿಕ್ಕಬಳ್ಳಾಪುರ ವಿಭಾಗದಿಂದ ಬೇರ್ಪಡಿಸಿ ಬೆಂಗಳೂರಿನ ಕೇಂದ್ರ ಡಿಪೋಗೆ ಸೇರಿಸುವಂತೆ ಕೋರುತ್ತೇವೆ ಹಾಗೂ ಈಗಾಗಲೇ ರದ್ದುಪಡಿಸಿರುವ ಬಸ್ಸುಗಳ ರೂಟ್ (ಭಾಗಮಂಡಲ, ಲಕ್ಷೇಶ್ವರ ನಂದಿಬೆಟ್ಟ) ಬಸ್ಸುಗಳನ್ನು ಹಾಗೂ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳ ಸೇವೆಯನ್ನು ದೊಡ್ಡಬಳ್ಳಾಪುರದಿಂದ ಕಾವೇರಿ ಭವನಕ್ಕೆ ಬೆಳಿಗ್ಗೆ 07-09 ಗಂಟೆಯವರೆಗೆ ಹಾಗೂ ಕಾವೇರಿ ಭವನದಿಂದ ದೊಡ್ಡಬಳ್ಳಾಪುರಕ್ಕೆ ಸಂಜೆ 6-8ಗಂಟೆಯವರೆಗೆ ಹೆಚ್ಚುವರಿ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದರು.

ಮನವಿ ಸ್ವೀಕರಿಸಿದ ಸಚಿವ ರಾಮಲಿಂಗಾ ರೆಡ್ಡಿ ಅವರು, ತ್ವರಿತವಾಗಿ ಸ್ಪಂದಿಸಿ ಜಿಲ್ಲಾ ಸಾರಿಗೆ ಸೆಂಟ್ರಲ್ ಡಿಪೋ ಮುಖ್ಯಸ್ಥ ಆಂಟೊನಿ ಎನ್ನುವವರಿಗೆ ಕರೆ ಮಾಡಿ ಹೆಚ್ಚುವರಿ ಬಸ್ಸುಗಳನ್ನು ಒಂದು ವಾರದ ಒಳಗಾಗಿ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು‌.

ಇದರ ಬೆನ್ನಲ್ಲೇ ಎರಡು ಬಸ್ ದೊಡ್ಡಬಳ್ಳಾಪುರಕ್ಕೆ ಮಂಜೂರು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime