ವಾಲ್ಮೀಕಿ ನಿಗಮ ಹಗರಣ: 18 ಕಡೆ ಏಕಕಾಲಕ್ಕೆ ED ದಾಳಿ..!
ವಾಲ್ಮೀಕಿ ನಿಗಮ ಹಗರಣ: 18 ಕಡೆ ಏಕಕಾಲಕ್ಕೆ ED ದಾಳಿ..!

ಬೆಂಗಳೂರು, (ಜುಲೈ.10); ತೀವ್ರ ಚರ್ಚಿತ ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಸಚಿವ ನಾಗೇಂದ್ರ ಮತ್ತು ಶಾಸಕ ಬಸನಗೌಡ ದದ್ದಲ್ ಮನೆ ಸೇರಿದಂತೆ ಏಕಕಾಲದಲ್ಲಿ ಒಟ್ಟು 18 ಕಡೆಗಳಲ್ಲಿ ಇಡಿ ದಾಳಿ ನಡೆಸಿದೆ.

ಮಾಜಿ ಸಚಿವ ನಾಗೇಂದ್ರ ಅವರ ಬಳ್ಳಾರಿ‌ ನೆಹರೂ ಕಾಲೋನಿ ಮತ್ತು ಬೆಂಗಳೂರಿನ ಬಿಇಎಲ್ ಸಮೀಪವಿರುವ ನಿವಾಸಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದೆ. ಸ್ಥಳೀಯ ಪೊಲೀಸರ ನೆರವಿಲ್ಲದೆ ಸಿಆರ್‌ಪಿಎಫ್‌ ಜೊತೆ ಸೇರಿ ದಾಳಿ ನಡೆಸಿದೆ.

ಬೆಳ್ಳಂಬೆಳಗ್ಗೆ ಬೆಂಗಳೂರು, ಬಳ್ಳಾರಿ ಮತ್ತು ರಾಯಚೂರು ಸೇರಿದಂತೆ 18 ಕಡೆ ದಾಳಿ ಮಾಡಲಾಗಿದ್ದು, ಹಗರಣಕ್ಕೆ ಸಂಬಂಧಿಸಿದ ಅಧಿಕಾರಗಳ ಮನೆಯನ್ನು ಪರಿಶೀಲಿಸಲಾಗಿದೆ.

ವಾಲ್ಮಿಕಿ ಅಭಿವೃದ್ದಿ ನಿಗಮ ಮಂಡಳಿಯಲ್ಲಿ ಐವರು ಇಡಿ ಅಧಿಕಾರಿಗಳಿಂದ ದಾಳಿ ನಡೆದಿದೆ. ಬೆಳಿಗ್ಗೆ 3:30 ಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಉದ್ಯೋಗಿ ದೀಪ ಎಂಬುವವರ ಮನೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೀಪ ಅವರ ವಿಜಯನಗರದ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ ನಡೆಸಿ ದಾಖಲೆಗಳಿಗಾಗಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ನಡೆದಿದೆ

ಪ್ರಕರಣದ ವಿವರ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಗೊಂಡಿತ್ತು.

ಎಂಜಿ ರಸ್ತೆಯ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಹಣ ವಿವಿಧ ಬ್ಯಾಂಕ್‌ ಖಾತೆಗಳಿಗೆ ವರ್ಗಾಯಿಸಿದ್ದ ಆರೋಪಿಗಳು ಹೈದರಾಬಾದ್‌ನ ಸಹಕಾರಿ ಬ್ಯಾಂಕ್‌ಗೂ ಹಣ ವರ್ಗಾಯಿಸಿದ್ದರು.

ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದೆ.

ಪ್ರಕರಣ ಬೆಳಕಿಗೆ ಬಂದ ಮೇಲೆ ಸಚಿವ ನಾಗೇಂಧ್ರ ರಾಜಿನಾಮೆಯನ್ನೂ ನೀಡಿದ್ದಾರೆ

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

economy

HL

crime

HL

others

HL

health

HL

crime

HL

others

HL

health

HL

politics

HL

politics

HL

politics

HL

others

HL

crime

HL

others

HL

economy

HL

crime

HL

others

HL

politics

HL

crime

HL

politics

HL

education

HL

others

HL

politics

HL

education

HL

others

HL

politics

HL

crime

HL

crime

HL

others

HL

others