ಹವಾಮಾನ ಆಧಾರಿತ ಬೆಳೆ ವಿಮೆಗೆ ನೊಂದಾಯಿಸಲು ತೋಟಗಾರಿಕೆ ಇಲಾಖೆ ಅಧಿಕಾರಿಗಳ ಮನವಿ
ಹವಾಮಾನ ಆಧಾರಿತ ಬೆಳೆ ವಿಮೆಗೆ ನೊಂದಾಯಿಸಲು ತೋಟಗಾರಿಕೆ ಇಲಾಖೆ ಅಧಿಕಾರಿಗಳ ಮನವಿ

ದೊಡ್ಡಬಳ್ಳಾಪುರ, (ಜುಲೈ .10): 2024-25ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸ ಬಹುದಾಗಿದೆ.

ದೊಡ್ಡಬಳ್ಳಾಪುರ ತಾಲೂಕಿ ಕಸಬಾ, ಸಾಸಲು, ದೊಡ್ಡಬೆಳವಂಗಲ, ಮಧುರೆ, ತೂಬಗೆರೆ ಹೋಬಳಿಗಳನ್ನು ವಿಮೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ.

ಹವಾಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ, ಆರ್ದ್ರತೆ ಇತ್ಯಾದಿ ಮಾಹಿತಿಗಳನ್ನು ಸರ್ಕಾರದಿಂದ ಅಧಿಸೂಚಿತ ಟೆಲಿ ಮೆಟ್ರಿಕ್ ಮಳೆ ಮಾಪನ ಕೇಂದ್ರ ಮತ್ತು ಸ್ವಯಂಚಾಲಿತ ಹವಾಮಾನ ಕೇಂದ್ರಗಳಲ್ಲಿ ದಾಖಲಾಗುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ. 

ದೊಡ್ಡಬಳ್ಳಾಪುರ ತಾಲೂಕಿನ ನಾಲ್ಕು ಹೋಬಳಿ ವ್ಯಾಪ್ತಿಯಲ್ಲಿ ಮಾವು ಬೆಳೆಯಲ್ಲಿ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ-80,000ರೂ, ರೈತರು ಪಾವತಿಸಬೇಕಾದ ದರ (ಶೇ.5%)-4,000.

ದ್ರಾಕ್ಷಿ ಬೆಳೆಯಲ್ಲಿ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ-2,80,000ರೂ, ರೈತರು ಪಾವತಿಸಬೇಕಾದ ದರ (ಶೇ.5%ಗಳಲ್ಲಿ)-14,000.

ಮಾವು ಮತ್ತು ದ್ರಾಕ್ಷಿ ಬೆಳೆಯುವ ತಾಲೂಕಿನ ರೈತ ಬಾಂಧವರು ಈ ಯೋಜನೆಯಡಿ ನೊಂದಾಯಿಸಿ ಉಪಯೋಗ ಪಡೆದುಕೊಳ್ಳುವುದು.

ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ನಿಗಧಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ / ಕಂದಾಯ ರಶೀದಿ / ಖಾತೆ ಪುಸ್ತಕ / ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿ ಮತ್ತು ಸ್ವಯಂಘೋಷಿತ ಬೆಳೆ ವಿವರಗಳನ್ನು ಹತ್ತಿರದ ರಾಷ್ಟ್ರೀಯ ಅಧಿಕೃತ ಬ್ಯಾಂಕು / ಸಾಮಾನ್ಯ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಲ್ಲಿ ನೊಂದಾಯಿಸುವುದು. ವಿಮೆ ಮಾಡಿಸುವ ರೈತರು ಫ್ರೂಟ್ಸ್ ತಂತ್ರಾಂಶದ ನೋಂದಣಿ ಸಂಖ್ಯೆಯನ್ನು ಹೊಂದಿರಬೇಕಿದ್ದು, ನೋಂದಣಿ ಸಂಖ್ಯೆಗೆ ಪಹಣಿ ವಿವರಗಳನ್ನು ಜೋಡಿಸಬೇಕಿರುತ್ತದೆ.

ನೋಂದಣಿ ಸಂಖ್ಯೆ ಇಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬೇಕಿರುತ್ತದೆ.

ಬೆಳೆ ಸಾಲ ಪಡೆದ ರೈತರನ್ನು ಸಂಬಂಧಿಸಿದ ಬ್ಯಾಂಕಿನವರು ವಿಮೆ ವ್ಯಾಪ್ತಿಗೆ ನೊಂದಾಯಿಸಲಿದ್ದು, ಯೋಜನೆಯಲ್ಲಿ ನೊಂದಾಯಿಸಿಕೊಳ್ಳಲು ಇಚ್ಚಿಸದ ರೈತರು ಸಂಬಂಧಿಸಿದ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಿಗೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲು ಅವಕಾಶವಿರುತ್ತದೆ. 

ದೊಡ್ಡಬಳ್ಳಾಪುರ ತಾಲೂಕಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ KSHEMA(ಕ್ಷೇಮ) ಅಧಿಸೂಚಿತ ವಿಮಾ ಸಂಸ್ಥೆಯಾಗಿದೆ.

ಹೆಚ್ಚಿನ ಮಾಹಿತಿಗೆ ಸಹಾಯಕ ತೋಟಗಾರಿಕೆ ಅಧಿಕಾರಿ, ಕಸಬಾ ಹೋಬಳಿ (ಮೊ) 8892664191.

ಸಹಾಯಕ ತೋಟಗಾರಿಕೆ ಅಧಿಕಾರಿ, ಸಾಸಲು ಹೋಬಳಿ (ಮೊ) 7829030725.

ಸಹಾಯಕ ತೋಟಗಾರಿಕೆ ಅಧಿಕಾರಿ, ಮಧುರೆ ಹೋಬಳಿ (ಮೊ) 9538537491. 

ಸಹಾಯಕ ತೋಟಗಾರಿಕೆ ಅಧಿಕಾರಿ, ದೊಡ್ಡಬೆಳವಂಗಲ ಹೋಬಳಿ (ಮೊ) 9964828711. 

ಸಹಾಯಕ ತೋಟಗಾರಿಕೆ ಅಧಿಕಾರಿ, ತೂಬಗೆರೆ ಹೋಬಳಿ (ಮೊ) 8317483470.

ಸಹಾಯಕ ತೋಟಗಾರಿಕೆ ನಿರ್ದೇಶಕರು, (ತಾಂತ್ರಿಕ ಸಹಾಯಕರು), ಜಿಪಂ, ದೊಡ್ಡಬಳ್ಳಾಪುರ (ಮೊ) 9535412975.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿಪಂ, ದೊಡ್ಡಬಳ್ಳಾಪುರ (ಮೊ) 9880210892.

ಈ ಸಂಖ್ಯೆಗಳಿಗೆ ಸಂಪರ್ಕಿಸಬಹುದೆಂದು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

politics

HL

economy

HL

crime

HL

others

HL

health

HL

crime

HL

others

HL

health

HL

politics

HL

politics

HL

politics

HL

others

HL

crime

HL

others

HL

economy

HL

crime

HL

others

HL

politics

HL

crime

HL

politics

HL

education

HL

others

HL

politics

HL

education

HL

others

HL

politics

HL

crime

HL

crime

HL

others

HL

others