ದೊಡ್ಡಬಳ್ಳಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಗಳ ಕಣ್ಣೀರು.. ಶಿಕ್ಷಕರಿಗಾಗಿ ನಗರಸಭೆ ಸದಸ್ಯನ ಏಕಾಂಗಿ ಹೋರಾಟ
ದೊಡ್ಡಬಳ್ಳಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಗಳ ಕಣ್ಣೀರು.. ಶಿಕ್ಷಕರಿಗಾಗಿ ನಗರಸಭೆ ಸದಸ್ಯನ ಏಕಾಂಗಿ ಹೋರಾಟ

ದೊಡ್ಡಬಳ್ಳಾಪುರ, (ಜುಲೈ.11); ಕುವೆಂಪು ಅವರ ಗುರುಗಳಾದ ಟಿ.ಎಸ್.ವೆಂಕಣ್ಣಯ್ಯ ಅವರು ಶಿಕ್ಷಕರಾಗಿದ್ದ ಹಾಗೂ ಗಾಂಧಿವಾದಿ ಎಚ್.ನರಸಿಂಹಯ್ಯ ಅವರು ಪರೀಕ್ಷೆ ಬರೆದಿದ್ದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ವಿಭಾಗದಲ್ಲಿನ ಪ್ರೌಢ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶಾಲೆ ಆರಂಭವಾಗಿ ಒಂದೂವರೆ ತಿಂಗಳು ಕಳೆದರು, ಪಠ್ಯಚಟುವಟಿಕೆ ಆರಂಭವಾಗದೆ ವಿದ್ಯಾರ್ಥಿಗಳು ಕಣ್ಣೀರಿಡುವಂತಾಗಿದೆ.

ತಕ್ಷಣ ಶಿಕ್ಷಕರ ಹಾಗೂ ಬೋಧಕೇತರ ಸಿಬ್ಬಂದಿಯ ಕೊರತೆ ನೀಗಿಸಬೇಕು ಎಂದು ಶಿಕ್ಷಣ ಇಲಾಖೆಯ ರಾಜ್ಯ ಜಂಟಿ ನಿರ್ದೇಶಕಿ ವಿಜಯ.ಈ.ರವಿಕುಮಾರ್ ಅವರಿಗೆ ನಗರಸಭೆ ಸದಸ್ಯ ವಿ.ಎಸ್.ರವಿಕುಮಾರ್ ಗುರುವಾರ ಮನವಿ ಸಲ್ಲಿಸಿದ್ದಾರೆ. 

ಅವರು ಈ ಬಗ್ಗೆ ಹರಿತಲೇಖನಿಗೆ ಮಾಹಿತಿ ನೀಡಿ, ಸ್ವಾತಂತ್ರ್ಯ ಪೂರ್ವದಿಂದು ಇರುವ ನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ 635 ಜನ  ವಿದ್ಯಾರ್ಥಿಗಳು ದಾಖಲಾಗಿದ್ದಾರೆ.ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸೇರಿ 40 ಹುದ್ದೆಗಳು ಇವೆ. ಆದರೆ ಕರ್ತವ್ಯ ನಿರ್ವಹಿಸುತ್ತಿರುವವ ಸಂಖ್ಯೆ ಮಾತ್ರ 22. 18 ಖಾಲಿ ಹುದ್ದೆಗಳು ಇವೆ.

ಇಷ್ಟು ಖಾಲಿಹುದ್ದೆಗಳಿದ್ದಾಗ್ಯೂ ಆಷಾಡದಲ್ಲಿ ಅಧಿಕಮಾಸ ಎಂಬಂತೆ ಈ ಶಾಲೆಯ ಇಂಗ್ಲೀಷ್ ಭಾಷಾ ಶಿಕ್ಷಕರಾಗಿರುವ ರಾಜೇಶ್ ರಾಮಪ್ಪ ಯಡಹಳ್ಳಿ ಎಂಬ ಶಿಕ್ಷಕರು ಸುಮಾರು ನಾಲ್ಕು ವರ್ಷಗಳಿಂದ ಜಿಲ್ಲಾ ಪಂಚಾಯಿತಿ ಕಾರ್ಯಾಲಯ ನಿಯಮಭಾಹಿರವಾಗಿ ನಿಯೋಜನೆಗೊಂಡಿರುತ್ತಾರೆ ಎಂಬುದು ನಗರಸಭೆ ಸದಸ್ಯ ವಡ್ಡರಹಳ್ಳಿ ರವಿಕುಮಾರ್ ಅವರ ಆರೋಪವಾಗಿದೆ.

ಶಾಲೆಗೆ ಭೇಟಿ ನೀಡಿದರೇ.‌. ಇಲ್ಲಿನ ವಿದ್ಯಾರ್ಥಿಗಳು ಶಾಲೆ ಅರಂಭವಾಗಿ ಒಂದುವರೆ ತಿಂಗಳು ಕಳೆದರು ಇಂಗ್ಲೀಷ್ ಶಿಕ್ಷಕರಿಲ್ಲವೆಂದು ಕಣ್ಣೀರು ಹಾಕುತ್ತಾರೆ. 

ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದ ಶಾಲೆ ಈಗ 600ಕ್ಕೆ ಕುಸಿದಿದೆ ಎಂದರೆ.. ಇದರ ಕಾರಣವೇನು..? ನಗರ ವ್ಯಾಪ್ತಿಯಲ್ಲಿಯೇ ಸರ್ಕಾರಿ ಶಾಲೆಯ ಸ್ಥಿತಿ ಆದರೆ. ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕೇಳುವವರು ಯಾರು..? ಎಂದು ಪ್ರಶ್ನಿಸಿರುವ ರವಿಕುಮಾರ್, ಈ ಕುರಿತು ಶಿಕ್ಷಣ ಇಲಾಖೆ ಉಪನಿರ್ದೇಶಕರು, ಜಿಲ್ಲಾಪಂಚಾಯಿತಿ ಸಿಇಒ, ಜಂಟಿ ನಿರ್ದೇಶಕರಾದ ವಿಜಯ ಈ ರವಿಕುಮಾರ್ ಅವರಿಗೂ ಕ್ರಮವಹಿಸುವಂತೆ ಮನವಿ ಮಾಡಿದ್ದೇವೆ. 

ನಗರದಲ್ಲಿನ ಸರ್ಕಾರಿ ಪ್ರೌಢ ಶಾಲೆಗೆ ಇಂಗ್ಲಿಷ್ ಶಿಕ್ಷಕರ ನೇಮಕ,ಬೋಧಕೇತರ ಸಿಬ್ಬಂದಿ ಕೊರತೆ ನೀಗಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕಲ ಅಧಿಕಾರಿಗಳಿಂದ ಮೊದಲುಗೊಂಡು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳವರೆಗೂ ವಾಸ್ತವ ಸ್ಥಿತಿಯನ್ನು ವಿವರಿಸಿ ಮನವಿ ಸಲ್ಲಿಸಲಾಗಿದೆ. ಶಾಲೆಯ ಮುಂದೆ ಪೋಷಕರು ಹಾಗೂ ಸಮಾನ ಮನಸ್ಕರೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime

HL

sports

HL

others