Doddaballapura: ಎಂ‌ಎಸ್‌ವಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪದವಿ ಪ್ರದಾನ..!
Doddaballapura: ಎಂ‌ಎಸ್‌ವಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪದವಿ ಪ್ರದಾನ..!

ದೊಡ್ಡಬಳ್ಳಾಪುರ, (ಜುಲೈ.13): ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ನಾಯಕರಿಗೆ ಪದವಿ ಪ್ರದಾನ ಹಾಗೂ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಸುರೇಶ್ ಬಿ.ಪಿ. ರವರು ಆಗಮಿಸಿದ್ದರು.

ಈ ವೇಳೆ ಮಾತನಾಡಿದ ಅವರು, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಅನ್ನುವ ಹಾಗೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಬೇಕು. ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಎಂ.ಎಸ್.ವಿ. ಶಾಲೆಯಲ್ಲಿ ಚುನಾವಣೆಯನ್ನು ಹಮ್ಮಿಕೊಂಡು ನಾಯಕರನ್ನು ಆಯ್ಕೆ ಮಾಡಿರುವುದು ಹಾಗೂ ಹದಿನೆಂಟು ವರ್ಷ ತುಂಬುವ ಒಳಗಾಗಿ ಮಕ್ಕಳಲ್ಲಿ ಚುನಾವಣಾ ಪ್ರಕ್ರಿಯೆ ಹೇಗೆ ನಡೆಯುವುದು ಎಂಬುದನ್ನು ಪ್ರಾಯೋಗಿಕವಾಗಿ ಚುನಾವಣೆ ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಪೂರ್ವಭಾವಿಯಾಗಿ ಚುನಾವಣಾ ಪ್ರಕ್ರಿಯೆಯ ಅರಿವನ್ನು ಮೂಡಿಸುವ ಕಾರ್ಯ ಶ್ಲಾಘನೀಯವಾದುದು ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಸಂಸ್ಥೆಯ ಸಂಸ್ಥಾಪಕ ಎ.ಸುಬ್ರಮಣ್ಯ ಮಾತನಾಡಿ, ಸಮಾಜದಲ್ಲಿ ಉತ್ತಮ ನಾಯಕರಾಗಲು ಉತ್ತಮ ನಾಯಕತ್ವ ಬೆಳೆಸಿಕೊಳ್ಳುವುದರ ಜೊತೆಗೆ, ಮೌಲ್ಯವುಳ್ಳ ಬದುಕು ನಮ್ಮದಾಗಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದ ಅಂಗವಾಗಿ ಚುನಾಯಿತು ವಿದ್ಯಾರ್ಥಿ ಪ್ರತಿನಿಧಿಗಳಿಗೆ ಬ್ಯಾಡ್ಜ್ ಗಳನ್ನು ವಿತರಿಸಿ, ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. 

ಶಿಸ್ತುಬದ್ಧವಾದ ಕವಾಯತು, ನೃತ್ಯ ಗಾಯನ, ನಾಟಕ ಮುಂತಾದ ಮನರಂಜನಾ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು.

ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ  ಸ್ವರೂಪ್.ಎಸ್., ಆಡಳಿತಾಧಿಕಾರಿ ನಯನಾ ಸ್ವರೂಪ್, ಪ್ರಾಂಶುಪಾಲರಾದ ರೆಮ್ಯ.ಬಿ.ವಿ., ಉಪ ಪ್ರಾಂಶುಪಾಲರಾದ ಪ್ರತಿಮಾ ಪೈ ಹಾಗೂ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನೂತನ ಆಡಳಿತ ಮಂಡಳಿ: 

ಶಾಲಾ ನಾಯಕ: ಧನುಷ್ ಕುಮಾರ್ ವಿ., ಉಪನಾಯಕ ಮೌರ್ಯ ಎಮ್.,  ನಾಯಕಿ ನಕ್ಷಾ.ವಿ., ಉಪನಾಯಕಿ ಹೇಮಾಂಶಿ, ಸಾಂಸ್ಕೃತಿಕ ನಾಯಕ ಜೀವನ್.ಎಸ್.,  ಸಾಂಸ್ಕೃತಿಕ ನಾಯಕಿ ಚಂದನಾ.ಎಲ್., ಕ್ರೀಡಾ ನಾಯಕ ಚಿರಾಗ್ ಜೈನ್, ಹಾಗೂ ಕ್ರೀಡಾ ನಾಯಕಿ ಯಶ್ಮಿತಾ.ಜಿ.ಆರ್.  ಮೊದಲಾದವರನ್ನು ಒಳಗೊಂಡಂತೆ ಚುನಾಯಿತ ಪ್ರತಿನಿಧಿಗಳಿಗೆ ಅಧಿಕಾರ ಪ್ರದಾನ ಮಾಡಲಾಯಿತು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

-->

Latest News

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime

HL

sports

HL

others