ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲ್ಲ: ಡಿಕೆ ಸುರೇಶ್
ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲ್ಲ: ಡಿಕೆ ಸುರೇಶ್

ರಾಮನಗರ, (ಜೂ.11): ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ. ಸಾಮಾನ್ಯ ಕಾರ್ಯಕರ್ತನಾಗಿ, ಪಕ್ಷಕ್ಕಾಗಿ ದುಡಿಯುತ್ತೇನೆ. ನಮ್ಮ ಪಕ್ಷದಲ್ಲಿ ಸಮರ್ಥ ಅಭ್ಯರ್ಥಿಗಳಿದ್ದಾರೆ. ಉಪಚುನಾವಣೆಯಲ್ಲಿ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇವೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಸ್ಪಷ್ಟ ಪಡಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿಯವರು ರಾಮನಗರ ಜಿಲ್ಲೆ ಪ್ರತಿನಿಧಿಸುತ್ತಿದ್ದರು. ಈಗಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿದ್ದಾರೆ. ಅವರು ಸೇರಿ ಕರ್ನಾಟಕ ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರು ರಾಜ್ಯಕ್ಕಾಗುತ್ತಿರುವ ಅನ್ಯಾಯ ತಪ್ಪಿಸುತ್ತಾರೆಂಬ ಎಂದು ವಿಶ್ವಾಸ ವಕ್ತಪಡಿಸಿದರು.

ಕರ್ನಾಟಕಕ್ಕೆ ಕೇಂದ್ರದಿಂದ ತೆರಿಗೆ ಹಣ ಹಂಚಿಕೆ ವಿಚಾರದಲ್ಲಿ ಆಗುತ್ತಿರುವ ಅನ್ಯಾಯ ವಿರುದ್ಧ ಗಟ್ಟಿಯಾಗಿ ಧ್ವನಿ ಎತ್ತಿದೆ. ಇಡೀ ರಾಷ್ಟ್ರದಲ್ಲಿ ಟೀಕೆ ಎದುರಿಸಿದೆ. ಕರ್ನಾಟಕದ ಹಕ್ಕಿಗಾಗಿ ಧ್ವನಿ ಎತ್ತಲು ಈಗಲೂ ನಾನು ಸಿದ್ಧನಿದ್ದೇನೆ ಎಂದರು.

ಎಚ್‌ಡಿಕೆ, ಯೋಗೇಶ್ವ‌ರ್ ಚರ್ಚೆ: ಕೇಂದ್ರ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡಿರುವ ಎಚ್.ಡಿ.ಕುಮಾರಸ್ವಾಮಿ ಅವರು ಚನ್ನಪಟ್ಟಣ ಶಾಸಕ ಸ್ಥಾನ ತೊರೆಯಬೇಕಾಗಿರುವುದರಿಂದ ಭವಿಷ್ಯದ ಉಪಚುನಾವಣೆ ಕುರಿತು ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಅವರು ಖುದ್ದು ಕುಮಾರಸ್ವಾಮಿ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಸೋಮವಾರ ದೆಹಲಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಅವರು ಕೆಲಕಾಲ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ದಿನದಲ್ಲಿ ನಡೆಯುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚು ನಾವಣೆಗೆ ಅಭ್ಯರ್ಥಿಯ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ ಎಂದು ಹೇಳಿದರು.

ಉಪಚುನಾ ವಣೆಯಲ್ಲಿ ಯಾರೇ ಅಭ್ಯರ್ಥಿಯಾದರೂ ಮೈತ್ರಿ ಅಭ್ಯರ್ಥಿ ಗೆಲುವಿಗೆ ಒಟ್ಟಾಗಿ ಶ್ರಮಿಸುತ್ತೇವೆ. ಎಚ್.ಡಿ.ಕುಮಾರಸ್ವಾಮಿ ಕೇಂದ್ರದಲ್ಲಿ ಸಚಿವರಾಗಿರುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ಶಾಸಕ ಸ್ಥಾನ ತೆರವಾಗಲಿದೆ ಎಂದರು.


ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

crime

HL

economy

HL

others

HL

crime

HL

others

HL

politics

HL

others

HL

economy

HL

others

HL

agriculture

HL

others

HL

economy

HL

crime

HL

others

HL

politics

HL

others

HL

politics

HL

crime

HL

others

HL

education

HL

politics

HL

others

HL

others

HL

crime

HL

economy

HL

travel

HL

others

HL

literature

HL

politics

HL

travel