ಕೊಲೆ ಆರೋಪ; ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಪ್ತೆ ಪವಿತ್ರ ಗೌಡ ಪೊಲೀಸರ ವಶಕ್ಕೆ
ಕೊಲೆ ಆರೋಪ; ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಪ್ತೆ ಪವಿತ್ರ ಗೌಡ ಪೊಲೀಸರ ವಶಕ್ಕೆ

ಮೈಸೂರು, (ಜೂ.11): ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧನದ ಬೆನ್ನಲ್ಲೆ, ದರ್ಶನ್ ಆಪ್ತೆ ಪವಿತ್ರ ಗೌಡ ಅವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ .

ಇಂದು ಬೆಳಗ್ಗೆ ಮೈಸೂರಿನ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಅವರನ್ನ ಬಂಧಿಸಲಾಗಿತ್ತು. ಇದರ ಬೆನ್ನಲ್ಲೆ ದರ್ಶನ್ ಗೆಳತಿ ಪವಿತ್ರಾ ಗೌಡ ಅವರನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ; ನಟ ದರ್ಶನ್ ಪವಿತ್ರಾ ಗೌಡ ಎಂಬಾಕೆ ಜೊತೆ ಆಪ್ತವಾಗಿದ್ದು, ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತ ಅಶ್ಲೀಲ ಮೇಸೆಜ್ ಮಾಡಿದ್ದನು ಎಂದು ಹೇಳಲಾಗಿದೆ. ಇದರಿಂದ ಕೆರಳಿದ ದರ್ಶನ್ ಮತ್ತು ಅವರ ಸ್ನೇಹಿತರು ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.

ಇದಾಗಿ ಮೋರಿಯಲ್ಲಿ ತೇಲುತ್ತಿದ್ದ ಶವವನ್ನು ಬೀದಿನಾಯಿಗಳು ಕಚ್ಚಿ ಎಳೆದುತಂದಾಗಲೇ ಶವ ಪತ್ತೆಯಾಗಿದ್ದು. ಶವ ಪತ್ತೆಯಾಗಿತ್ತು. ಪೊಲೀಸರು ಈ ಬಗ್ಗೆ ತನಿಖೆ ಮಾಡುತ್ತಾ ಹೋದಾಗ ಇದರ ಹಿಂದಿನ ರೂವಾರಿ ದರ್ಶನ್ ಎಂದು ವರದಿಯಾಗಿದೆ.

ನಟ ದರ್ಶನ್ ಸೂಚನೆ ಮೇರೆಗೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.

ಚಿತ್ರದುರ್ಗದಿಂದ ರೇಣುಕಾ ಸ್ವಾಮಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ವಿನಯ್​ ಎನ್ನುವವರಿಗೆ ಸೇರಿದ ಶೆಡ್​ನಲ್ಲಿ ಅವರನ್ನು ಇರಿಸಲಾಗಿತ್ತು. ಈ ವೇಳೆ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪ ವ್ಯಾಪಕವಾಗಿದೆ.

4 ಜನ ಹಲ್ಲೆ ಮಾಡಿದ ತಂಡದಲ್ಲಿ ದರ್ಶನ್​ ಇದ್ದ ಬಗ್ಗೆ ಮಾಹಿತಿ ಇದೆ. ಹತ್ಯೆ ಮಾಡಿ ಮೃತದೇಹವನ್ನು ಮೋರಿಯಲ್ಲಿ ಎಸೆದು ಹೋಗಲಾಗಿತ್ತು. ವಿಜಯನಗರ ACP ಚಂದನ್​ ತಂಡದಿಂದ ದರ್ಶನ್​ ವಶಕ್ಕೆ ಪಡೆಯಲಾಗಿದೆ.

ಘಟನೆ ಸಂಬಂಧ ರೇಣುಕಾಸ್ವಾಮಿ ಪೋಷಕರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

others

HL

crime

HL

politics

HL

economy

HL

economy

HL

economy

HL

crime

HL

others

HL

others

HL

others

HL

others

HL

others

HL

politics

HL

others

HL

sports

HL

others

HL

others

HL

education

HL

politics

HL

economy

HL

politics

HL

sports

HL

others

HL

economy

HL

others

HL

others

HL

crime

HL

education

HL

others

HL

politics