ದರ್ಶನ್ ಅರೆಸ್ಟ್ ಪ್ರಕರಣ; ಪೊಲೀಸ್ ಆಯುಕ್ತರು ಹೇಳಿದ್ದು ಇಷ್ಟು..!
ದರ್ಶನ್ ಅರೆಸ್ಟ್ ಪ್ರಕರಣ; ಪೊಲೀಸ್ ಆಯುಕ್ತರು ಹೇಳಿದ್ದು ಇಷ್ಟು..!

ಬೆಂಗಳೂರು, (ಜೂ.11); ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ಹತ್ಯೆ ಪ್ರಕರಣದ ಆರೋಪದಡಿ ಕನ್ನಡದ ಓರ್ವ ನಟನನ್ನ ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.

ಜೂನ್ 9ರಂದು ಅಪರಿಚಿತ ಶವ ಪತ್ತೆಯಾಗಿತ್ತು. ಮೃತದೇಹದ ಮೇಲಿದ್ದ ಗಾಯಗಳನ್ನ ಗಮನಿಸಿ ಹತ್ಯೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ನಂತರ ತಾಂತ್ರಿಕ ಅಂಶಗಳ ಆಧಾರದಲ್ಲಿ ಮೃತನ ವಿವರ ಕಲೆಹಾಕಲಾಗಿತ್ತು. 

ಮೃತ ವ್ಯಕ್ತಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (33 ವರ್ಷ) ಎಂಬುದು ತಿಳಿದು ಬಂದಿತ್ತು. ತನಿಖೆಯ ಕಾಲದಲ್ಲಿ ನಟ ಹಾಗೂ ಆತನ ಸಹಚರರ ಸಹಿತ 10 ಜನರನ್ನ ವಶಕ್ಕೆ ಪಡೆಯಲಾಗಿದೆ. 

ಹತ್ಯೆಯಾದ ವ್ಯಕ್ತಿ ಮಹಿಳೆಯೊಬ್ಬರಿಗೆ ಅಶ್ಲೀಲವಾಗಿ ಮೆಸೇಜ್​​ಗಳನ್ನ ಕಳುಹಿಸುತ್ತಿದ್ದ ಎಂಬ ಪ್ರಾಥಮಿಕ‌ ಮಾಹಿತಿ ದೊರೆತಿದೆ. ಹೆಚ್ಚಿನ ವಿಚಾರಣೆ ಮುಂದುವರೆದಿದೆ ಎಂದು ದಯಾನಂದ್ ಸ್ಪಷ್ಟನೆ ನೀಡಿದ್ದಾರೆ.

ನಟ ದರ್ಶನ್, ವಿನಯ್, ಕಿರಣ್, ಮಧು, ಲಕ್ಷ್ಮಣ್, ಆನಂದ್, ರಾಘವೇಂದ್ರ ಸೇರಿದಂತೆ 10 ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಇದೀಗ ವಿಚಾರಣೆ ನಡೆಸಿದ್ದಾರೆ.

ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್, ಎಸಿಪಿ ಚಂದನ್ ನೇತೃತ್ವದಲ್ಲಿ ವಿಚಾರಣೆ ನಡೆಸಿದ್ದಾರೆ.

ಮತ್ತೊಂದೆಡೆ ಅನ್ನಪೂರ್ಣ ನಗರ ಠಾಣೆ ಪೊಲೀಸರು, ದರ್ಶಙ್ ಅಪ್ತೆ ಪವಿತ್ರ ಗೌಡ ಅವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

crime

HL

politics

HL

economy

HL

economy

HL

economy

HL

crime

HL

others

HL

others

HL

others

HL

others

HL

others

HL

politics

HL

others

HL

sports

HL

others

HL

others

HL

education

HL

politics

HL

economy

HL

politics

HL

sports

HL

others

HL

economy

HL

others

HL

others

HL

crime

HL

education

HL

others

HL

politics

HL

crime