ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್; ವಾಹನ ಸವಾರರಿಗೆ ಕೋರ್ಟ್‌ನಿಂದ ಗುಡ್ ನ್ಯೂಸ್
ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್; ವಾಹನ ಸವಾರರಿಗೆ ಕೋರ್ಟ್‌ನಿಂದ ಗುಡ್ ನ್ಯೂಸ್

ಬೆಂಗಳೂರು, (ಜೂ.12); ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ವಿಧಿಸಲಾಗಿರುವ ಗಡುವನ್ನು ವಿಸ್ತರಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ನಂಬರ್ ಪ್ಲೇಟ್ ಅಳವಡಿಕೆಗೆ ಜುಲೈ 4ರವರೆಗೆ ಗಡುವು ವಿಸ್ತರಣೆ ಮಾಡಲಾಗಿದ್ದು, ಅಲ್ಲಿಯವರೆಗೂ ವಾಹನ ಸವಾರರಿಗೆ, ಮಾಲೀಕರಿಗೆ ಯಾವುದೇ ಕಠಿಣ ಕ್ರಮ ಜರುಗಿಸದಂತೆ ಕೋರ್ಟ್‌ ನಿರ್ದೇಶಿಸಿದೆ

ರಾಜ್ಯದಲ್ಲಿ ಎಲ್ಲ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೆಚ್‌ಎಸ್‌ಆರ್‌ಪಿ)ವನ್ನು ಕಡ್ಡಾಯವಾಗಿ ಅಳವಡಿಸುವಂತೆ ಆದೇಶ ಹೊರಡಿಸಿದ ನಂತರ ನಂಬರ್‌ ಪ್ಲೇಟ್‌ ಅಳವಡಿಕೆಗೆ ಮೇ 31ರವರೆಗೂ ಗಡುವು ನೀಡಿತ್ತು.

ಮೇ 31ರವರೆಗೆ ಇದ್ದ ಗಡುವು ವಿಸ್ತರಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೆಚ್‌ಎಸ್‌ಆರ್‌ಪಿ ತಯಾರಿಕಾ ಕಂಪೆನಿಯಾದ ಬಿಎನ್‌ಡಿ ಎನರ್ಜಿ ಲಿಮಿಟೆಡ್ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಮೇ 21ರಂದು ಹೊರಡಿಸಿದ್ದ ಆದೇಶದಲ್ಲಿ ಜೂನ್.12ಕ್ಕೆ ನಿಗದಿ ಪಡಿಸಿತ್ತು‌.

ಆದರೆ ಇದೀಗ ಬಂದ ಮಾಹಿತಿ ಅನ್ವಯ ಇಂದು ಹೈಕೋರ್ಟ್ ಜುಲೈ 4ರವರೆಗೂ ವಿಸ್ತರಿಸಿದೆ ಎಂದು ವರದಿಯಾಗಿದೆ.

ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ, ಹೆಚ್‌ಎಸ್‌ಆರ್‌ಪಿ ನಂಬರ್ ಫಲಕಗಳ ಕಡ್ಡಾಯದ ಅವಧಿಯನ್ನು ವಿಸ್ತರಿಸಲು ರಾಜ್ಯ ಸರ್ಕಾರ ಆಗಸ್ಟ್ ಇಲ್ಲವೇ ಸೆಪ್ಟಂಬರ್‌ವರೆಗೂ ವಿಸ್ತರಿಸಲು ಚಿಂತನೆ ನಡೆಸಿದೆ. ಈ ಸಂಬಂಧ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸುವುದಾಗಿ ತಿಳಿಸಿದೆ. ಹೈಕೋರ್ಟ್ ಅನುಮತಿ ನೀಡಿದಲ್ಲಿ ಸರ್ಕಾರ ಅವಧಿ ವಿಸ್ತರಣೆ ಮಾಡಲಿದೆ ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

-->

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime