ದೊಡ್ಡಬಳ್ಳಾಪುರದಲ್ಲಿ ತಪ್ಪದ ಸಾರಿಗೆ ಅವ್ಯವಸ್ಥೆ; ಕೆರಳಿದ ಪ್ರಯಾಣಿಕರಿಂದ ಬಸ್ಸುಗಳನ್ನು ತಡೆದು ಪ್ರತಿಭಟನೆ| ವಿಡಿಯೋ
ದೊಡ್ಡಬಳ್ಳಾಪುರದಲ್ಲಿ ತಪ್ಪದ ಸಾರಿಗೆ ಅವ್ಯವಸ್ಥೆ; ಕೆರಳಿದ ಪ್ರಯಾಣಿಕರಿಂದ ಬಸ್ಸುಗಳನ್ನು ತಡೆದು ಪ್ರತಿಭಟನೆ| ವಿಡಿಯೋ

ದೊಡ್ಡಬಳ್ಳಾಪುರ, (ಜೂ.18); ತಾಲೂಕಿನಲ್ಲಿ ಸಾರಿಗೆ ಅವ್ಯವಸ್ಥೆ ಒಂದಿಲ್ಲೊಂದು ಸಮಸ್ಯೆ ಸೃಷ್ಟಿಸುತ್ತಿದ್ದು, ಸೂಕ್ತ ನಿರ್ವಹಣೆ ಕೊರತೆಯಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಗ್ರಾಮಾಂತರ ಪ್ರದೇಶದಿಂದ ದೊಡ್ಡಬಳ್ಳಾಪುರ ನಗರಕ್ಕೆ ಹಾಗೂ ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಪ್ರತಿನಿತ್ಯ ಸಾವಿರಾರು ಮಂದಿ ವಿದ್ಯಾರ್ಥಿಗಳು, ನೌಕರರು, ಕಾರ್ಮಿಕರು ಪ್ರಯಾಣಿಸುತ್ತಿದ್ದು, ಬೆಳಗ್ಗೆ ಮತ್ತು ಸಂಜೆಯ ವೇಳೆ ಸೂಕ್ತ ಸಾರಿಗೆ ಬಸ್ ನಿರ್ವಹಣೆ ಕೊರತೆಯಿಂದ ಪರದಾಡುವಂತಾಗಿದೆ.

ಇಂದು ಬೆಳಗ್ಗೆ ನಗರದ ಬಸ್ ನಿಲ್ದಾಣದಲ್ಲಿ ಸೂಕ್ತ ಬಸ್ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಸಾರ್ವಜನಿಕರು ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಳಗ್ಗಿನ 07 ಗಂಟೆ ಸಮಯದಲ್ಲಿ ದೊಡ್ಡಬಳ್ಳಾಪುರ ಮೂಲಕ ಬೆಂಗಳೂರಿಗೆ ಸುಮಾರು 5 ಬಸ್ಸುಗಳು ಸಂಚರಿಸಬೇಕು. ಆದರೆ ಕೇವಲ ಒಂದು ಬಸ್ ಮಾತ್ರ ಬರುತ್ತಿದ್ದು ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದೆ.

ಅನಂತಪುರದ ಮೂರು, ತಿರುಪತಿಯ ಒಂದು ಹಾಗೂ ಚಿತ್ರದುರ್ಗದ ಒಂದು ಬಸ್ ಬೆಳಗ್ಗೆ 07 ರಿಂದ 08 ರ ಒಳಗೆ ಇಲ್ಲಿಂದ ಬೆಂಗಳೂರಿಗೆ ತೆರಳಬೇಕು ಆದರೆ ಸೂಕ್ತ ನಿರ್ವಹಣೆ ಇಲ್ಲದೆ ಬೇಕಾಬಿಟ್ಟಿಯಾಗಿ, ಸಮಯವಲ್ಲದ ಸಮಯಕ್ಕೆ ಬರುವ ಕಾರಣ ಪ್ರತಿನಿತ್ಯ ಸಮಸ್ಯೆ ಉಂಟಾಗುತ್ತಿದೆ ಎಂಬುದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಿಟ್ಟಿನ ಬಸ್ಸುಗಳನ್ನು ತಡೆದು ಪ್ರತಿಭಟನೆ ನಡೆಸಲಾಗುತ್ತಿದ್ದು, ಜನಪ್ರತಿನಿದಿಗಳು ಹಾಗೂ ಅಧಿಕಾರಿಗಳ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

-->

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime