ದೇಶದಲ್ಲಿ ಮೊದಲ ಬಾರಿಗೆ ಅಂಗನವಾಡಿಗಳಲ್ಲಿ LKG-UKG ಪ್ರಾರಂಭ; ಹೆಗ್ಗಳಿಕೆ ಪಾತ್ರವಾದ ಕರ್ನಾಟಕ
ದೇಶದಲ್ಲಿ ಮೊದಲ ಬಾರಿಗೆ ಅಂಗನವಾಡಿಗಳಲ್ಲಿ LKG-UKG ಪ್ರಾರಂಭ; ಹೆಗ್ಗಳಿಕೆ ಪಾತ್ರವಾದ ಕರ್ನಾಟಕ

ಬೆಂಗಳೂರು, (ಜುಲೈ 22): ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ಮಣಿದ ಕರ್ನಾಟಕ ಸರ್ಕಾರ ಅಂಗನವಾಡಿ ಕೇಂದ್ರಗಳಲ್ಲೇ ಎಲ್​ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭಿಸಿದೆ. 

ಬೆಂಗಳೂರಿನ ಪಟ್ಟೇಗಾರಪಾಳ್ಯದ ಅಂಗನವಾಡಿ ಕೇಂದ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಲ್​ಕೆಜಿ ಮತ್ತು ಯುಕೆಜಿ ತರಗತಿ ಆರಂಭಕ್ಕೆ ಇಂದು ಸಾಂಕೇತಿಕವಾಗಿ ಚಾಲನೆ ನೀಡಿದರು. 

ಈ ವೇಳೆ ಮಾತನಾಡಿದ ಅವರು, ಇಂದಿನಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸಾಂಕೇತಿಕವಾಗಿ ಆರಂಭವಾಗಿದೆ. ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಗುವುದು ಎಂದು ಹೇಳಿದರು.

ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಆಹಾರ ಮತ್ತು ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ. 30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರದಲ್ಲಿ ಎಲ್​ಕೆಜಿ ಮತ್ತು ಯುಕೆಜಿ ಪರಿಚಯಿಸುತ್ತಿರುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.

ರಾಜ್ಯದಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಆರಂಭಿಸಲು ಸರ್ಕಾರ ಚಿಂತನೆ ನಡೆಸಿತ್ತು. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ಕೂಡ ಮಾಡಿದ್ದರು. ಇದೀಗ, ಸರ್ಕಾರ ಬೆಂಗಳೂರು ನಗರ ವ್ಯಾಪ್ತಿಯ 250 ಅಂಗನವಾಡಿಗಳಲ್ಲಿ ಎಲ್​ಕೆಜಿ ಮತ್ತು ಯುಕೆಜಿ ಆರಂಭಿಸಿದೆ.

ಬೆಂಗಳೂರು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಪಟ್ಟೇಗಾರ ಪಾಳ್ಯದಲ್ಲಿ ಸೋಮವಾರ ನಡೆದ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಿಗೆ ಚಾಲನೆ ನೀಡುವ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಹಾಗೂ ಮೆಡಿಸಿನ್ ಕಿಟ್ ಗಳನ್ನು ವಿತರಿಸಲಾಯಿತು.

ಈ ವೇಳೆ ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಕಲಾಂಗ ಇಲಾಖೆಯ ಆಯುಕ್ತರಾದ ದಾಸ್ ಸೂರ್ಯವಂಶಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಸೇರಿದಂತೆ ಇಲಾಖೆಯ ಅಧಿಕಾರಿಗಳು, ಕಾವೇರಿಪುರ ವಾರ್ಡ್ ನ ಪ್ರಮುಖರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

-->

Latest News

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime