suicide: ಕ್ರಿಮಿನಾಶಕ ಸೇವಿಸಿ ದಂಪತಿ ಆತ್ಮಹತ್ಯೆ..!
suicide: ಕ್ರಿಮಿನಾಶಕ ಸೇವಿಸಿ ದಂಪತಿ ಆತ್ಮಹತ್ಯೆ..!

ನ್ಯಾಮತಿ, ಜುಲೈ.(23): ಆನಾರೋಗ್ಯಕ್ಕೆ ಬೇಸತ್ತ ದಂಪತಿಗಳಿಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ಮೃತರನ್ನು 65 ವರ್ಷದ ಷಣ್ಮುಖಪ್ಪ, 50 ವರ್ಷದ ಇಂದ್ರಮ್ಮ ದುರ್ದೈವಿ ದಂಪತಿಗಳೆಂದು ಗುರುತಿಸಲಾಗಿದೆ.

ಕಾಯಿಲೆಗಳಿಂದ ಬಳಲುತ್ತಿದ್ದ ದಂಪತಿಗೆ ಮಕ್ಕಳಿರಲಿಲ್ಲ. ಇಳಿ ವಯಸ್ಸಿನಲ್ಲಿ ನಮ್ಮ ಆರೈಕೆ ಮಾಡುವರು ಯಾರೆಂದು ಬೇಸತ್ತು ಇಬ್ಬರೂ ಕ್ರಿಮಿನಾಶಕ ಸೇವಿಸಿದ್ದಾರೆ ಎನ್ನಲಾಗಿದೆ.

ವಿಚಾರ ತಿಳಿದ ಅಕ್ಕ-ಪಕ್ಕದ ಮನೆಯವರು ತಕ್ಷಣ ದಂಪತಿಯನ್ನು ಆಸ್ಪತ್ರೆಗೆ ಸೇರಿಸಲು ಶಿವಮೊಗ್ಗಕ್ಕೆ ತೆರಳಿದ್ದಾರೆ. ಈ ವೇಳೆ ಷಣ್ಮುಖಪ್ಪ ಮಾರ್ಗ ಮಧ್ಯೆ ಮೃತಪಟ್ಟಿದ್ದು ಇಂದ್ರಮ್ಮ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೆ ಇಂದ್ರಮ್ಮ ಕೂಡ ಪ್ರಾಣ ಬಿಟ್ಟಿದ್ದಾರೆ.

ಘಟನೆ ಕುರಿತು ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime