ದೊಡ್ಡಬಳ್ಳಾಪುರ: ಇಂದು ಶಿಕ್ಷಕರ ದಿನಾಚರಣೆ.. ಮಾಧ್ಯಮಗಳಿಗೆ ಆಹ್ವಾನ ನೀಡಲು ಜಿಪುಣತನವೇಕೆ.‌?
ದೊಡ್ಡಬಳ್ಳಾಪುರ: ಇಂದು ಶಿಕ್ಷಕರ ದಿನಾಚರಣೆ.. ಮಾಧ್ಯಮಗಳಿಗೆ ಆಹ್ವಾನ ನೀಡಲು ಜಿಪುಣತನವೇಕೆ.‌?

ದೊಡ್ಡಬಳ್ಳಾಪುರ, (ಸೆ.05); ನಮ್ಮ ಭಾರತದ ಎರಡನೇ ರಾಷ್ಟ್ರಪತಿಗಳು ಮತ್ತು ಸ್ವತಃ ಶಿಕ್ಷಕರೂ ಆಗಿದ್ದ ಶ್ರೀ ಸರ್ವಪಲ್ಲಿ ರಾಧಾಕೃಷ್ಣನ್ ಅವರು ತಮ್ಮ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುವಂತೆ ಕರೆಕೊಟ್ಟಿದ್ದು ಅರ್ಥಪೂರ್ಣ ಎನ್ನಬಹುದು.

ವಿಶೇಷವೆಂದರೆ, ರಾಧಾಕೃಷ್ಣನ್ ಅವರು ತತ್ವಶಾಸ್ತ್ರ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ.

ಡಾ.ಸರ್ವಪಲ್ಲಿ ರಾಧಕೃಷ್ಣನ್ ಅವರ ಜನ್ಮ ದಿನಾಚರಣೆ ಹಾಗೂ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸೆ.5 ರಂದು ಬೆಳಿಗ್ಗೆ 10.30ಕ್ಕೆ ನಗರದ ಕೆ.ಎಂ.ಎಚ್.ಕನ್ವೆನ್ಷನ್ ಹಾಲ್ನಲ್ಲಿ ನಡೆಯಲಿದೆ. 

ಸಮಾರಂಭಕ್ಕು ಮುನ್ನ ಬೆಳಿಗ್ಗೆ 9.30ಕ್ಕೆ ತಾಲ್ಲೂಕು ಕಚೇರಿಯಿಂದ ಡಾ.ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವ ಚಿತ್ರದೊಂದಿಗೆ ಶಿಕ್ಷಕರ ಮೆರವಣಿಗೆ ನಡೆಯಲಿದೆ.

ಸಮಾರಂಭವನ್ನು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಮತ್ತುಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರು ಉದ್ಘಾಟಿಸಲಿದ್ದಾರೆ. 

ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಧೀರಜ್ ಮುನಿರಾಜ್ ವಹಿಸಲಿದ್ದಾರೆ. ಸಂಸತ್ ಸದಸ್ಯ ಡಾ.ಕೆ.ಸುಧಾಕರ್ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಆಯ್ಕೆಯಾಗಿರುವ ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.

ಆದರೆ ಈ ರೀತಿಯಾದ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ಆಹ್ವಾನ ನೀಡುವಲ್ಲಿ ಶಿಕ್ಷಣ ಇಲಾಖೆ ಸೇರಿದಂತೆ ಕಾರ್ಯಕ್ರಮ ಆಯೋಜನೆ‌ ಸಮಿತಿ ಲೋಪವೆಸಗಿದೆ ಎಂದು ಪತ್ರಕರ್ತರ ಸಂಘದ ನಿಕಟ ಪೂರ್ವ ಅಧ್ಯಕ್ಷ ಗಂಗರಾಜ್ ಶಿರವಾರ ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವು ಸಹ ನಮ್ಮೆಲ್ಲ ನೆಚ್ಚಿನ ಶಿಕ್ಷಕರನ್ನು ನೆನೆದು, ಅವರು ನಮಗೆ ನೀಡಿದ ಮಾರ್ಗದರ್ಶನ, ಶಿಕ್ಷಣ, ಕಲಿಸಿದ ನೈತಿಕ ಶಿಕ್ಷಣ, ಸಹಕಾರ, ವ್ಯಕ್ತಿತ್ವ ರೂಪುಗೊಳ್ಳಲು ನೀಡಿದ ಹಿತನುಡಿ ಎಲ್ಲವನ್ನು ಸ್ಮರಿಸಿ ಅವರಿಗೆ ಗೌರವ ಸಮರ್ಪಣೆ ನೀಡುವ ದಿನ. ಇಂತಹ ಪೂಜನೀಯ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ಸಮರ್ಪಕವಾಗಿ ಆಹ್ವಾನ ನೀಡದೇ ಇರುವುದು ಸರಿಯಲ್ಲವೆಂದು ಅವರು ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime

HL

economy

HL

crime

HL

sports

HL

others