ಬೆಂಗಳೂರು, (ಜ.23): ಕನ್ನಡ ಚಿತ್ರರಂಗದ ಹೆಸರಾಂತ ನಟ ಲಕ್ಷ್ಮಣ್ (74ವರ್ಷ) ಹೃದಯಾಘಾತದಿಂದಾಗಿ ಇಂದು ನಿಧನರಾಗಿದ್ದಾರೆ. ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಆಗಾಗ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದರು. ಸೋಮವಾರ ಬೆಳಿಗ್ಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲೇ ಲಕ್ಷ್ಮಣ್ ಕೊನೆಯುಸಿರು ಎಳೆದಿದ್ದಾರೆ.
ಮೂಡಲಪಾಳ್ಯದ ಅವರ ನಿವಾಸದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಇಂದೇ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಯಜಮಾನ, ಮಲ್ಲ, ಸೂರ್ಯವಂಶ ಸಿನಿಮಾಗಳು ಸೇರಿದಂತೆ ಖಳನಟನಾಗಿ ಲಕ್ಷ್ಮಣ್ ಪಾತ್ರ ಮಾಡಿದ್ದಾರೆ. ಮುನ್ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಮೂಲಕ ಅಸಂಖ್ಯಾತ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.
ಡಾ||ವಿಷ್ಣುವರ್ಧನ್, ರವಿಚಂದ್ರನ್, ಡಾ||ರಾಜ್ ಕುಮಾರ್, ಶಿವರಾಜ್ ಕುಮಾರ್, ಡಾ||ಅಂಬರೀಶ್ ಹೀಗೆ ಹಲವಾರು ದಿಗ್ಗಜ ನಟರೊಂದಿಗೆ ಪರದೆ ಹಂಚಿಕೊಂಡಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
others
economy
others
crime