ದೊಡ್ಡಬಳ್ಳಾಪುರ, (ಜ.23): ಶ್ರೀರಾಮ ಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಕಾರ್ಕಳ ಕ್ಷೇತ್ರದಿಂದ ಮುಂಬರುವ ವಿಧಾಸಭೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಆ ಮೂಲಕ ಕಟ್ಟರ್ ಹಿಂದುತ್ವವಾದಿಯನ್ನು ಕಡೆಗಣಿಸಿದ್ದ ಬಿಜೆಪಿಗೆ ಬಿಸಿ ಮುಟ್ಟಿಸಿದ್ದಾರೆ.
ಮುತಾಲಿಕ್ ಅವರ ಘೋಷಣೆಯಿಂದಾಗಿ ಇಂಧನ ಸಚಿವ ವಿ ಸುನೀಲ್ ಕುಮಾರ್ ಅವರ ಕ್ಷೇತ್ರದಲ್ಲಿ ಇದೀಗ ತ್ರಿಕೋನ ಸ್ಪರ್ಧೆ ಎದುರಾಗಲಿದ್ದು, ಕಾರ್ಕಳ ವಿಧಾನಸಭೆ ಚುನಾವಣಾ ಕಣ ರಂಗೇರಲಿದೆ.
ಕಾರ್ಕಳದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್ ಅವರು, ಯಾವುದೇ ಕಾರಣಕ್ಕೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ. ಯಾರು ಏನೇ ಒತ್ತಡ ಹಾಕಿದರೂ ನಾನು ಕಾರ್ಕಳ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುವುದು ನಿಶ್ಚಿತ. ಸಾವಿರಾರು ಕಾರ್ಯಕರ್ತರ ನೋವಿನ ಧ್ವನಿಯಾಗಿ, ಅವರ ಒತ್ತಡದಿಂದ ನಾನು ಸ್ಪರ್ಧೆ ಮಾಡುತ್ತೇನೆ ಎಂದರು.
ನಾನು ಬಿಜೆಪಿ ವಿರೋಧಿಯಲ್ಲ. ನಾನು ಮೋದಿ ಪರವಾಗಿ ಹಿಂದುತ್ವದ ಪರವಾಗಿದ್ದೇನೆ, ಗೆದ್ದ ನಂತರವೂ ನನ್ನ ಬೆಂಬಲ ಬಿಜೆಪಿಗೆ ಇರಲಿದೆ. ನನ್ನ ಸ್ಪರ್ಧೆ ಏನಿದ್ದರೂ ವ್ಯಕ್ತಿಗಳ ವಿರುದ್ಧ, ಭ್ರಷ್ಟರ ವಿರುದ್ದ, ಹಿಂದು ವಿರೋಧಿಗಳ ವಿರುದ್ಧ ಎಂದರು.
ಮುತಾಲಿಕ್ ಸ್ಪರ್ಧೆಯಿಂದ ಕಾಂಗ್ರೆಸ್ ಗೆ ಲಾಭ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಆ ಪ್ರಶ್ನೆಯೇ ಇಲ್ಲ. ನಾನು ಎಂದಿಗೂ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿಕೊಂಡು ಬಂದವ. ಇಲ್ಲಿ ನಾನು ಗೆಲ್ಲಬೇಕು, ಹಿಂದುತ್ವ ಗೆಲ್ಲಬೇಕು ಅಷ್ಟೇ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
agriculture
others
others
politics