ಯುವಕ-ಯುವತಿಯರಿಗೆ ಜ.24 ರಂದು ನೇರ ಸಂದರ್ಶನ
ಯುವಕ-ಯುವತಿಯರಿಗೆ ಜ.24 ರಂದು ನೇರ ಸಂದರ್ಶನ

ಬೆಂ.ಗ್ರಾ.ಜಿಲ್ಲೆ, (ಜ.23): ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಮೊಬೈಲ್‌ ಫೋನ್‌ಗಳ ದುರಸ್ತಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಜನವರಿ 24 ರಿಂದ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. 

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.

ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತ ಅಭ್ಯರ್ಥಿಗಳು 2023ರ ಜನವರಿ 24 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು.

ಆಸಕ್ತರು ಸಂದರ್ಶನದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಭೇಟಿ ನೀಡಬಹುದು ಅಥವಾ ಕಚೇರಿ ದೂರವಾಣಿ ಸಂಖ್ಯೆ: 080-27728166 (ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 6 ಗಂಟೆ), ಮೊಬೈಲ್‌ ಸಂಖ್ಯೆ: 9113880324, 9740982585, 8884554510, 8050549412, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಆನಂದ್‌.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

literature

HL

politics

HL

others

HL

politics

HL

crime

HL

others

HL

crime

HL

politics

HL

politics

HL

others

HL

literature

HL

others

HL

art

HL

others

HL

politics

HL

health

HL

crime

HL

politics

HL

art

HL

politics

HL

politics

HL

others

HL

others

HL

crime

HL

art

HL

others

HL

crime

HL

others

HL

politics

HL

literature