ದೊಡ್ಡಬಳ್ಳಾಪುರ: ಕಾಂಗ್ರೆಸ್ ಪ್ರಜಾದ್ವನಿ ಕಾರ್ಯಕ್ರಮದ ಬ್ಯಾನರ್ ಹರಿದ ಕಿಡಿಗೇಡಿಗಳು / ಕಾರ್ಯಕರ್ತರಲ್ಲಿ ಮಡುಗಟ್ಟಿದ ಆಕ್ರೋಶ
ದೊಡ್ಡಬಳ್ಳಾಪುರ: ಕಾಂಗ್ರೆಸ್ ಪ್ರಜಾದ್ವನಿ ಕಾರ್ಯಕ್ರಮದ ಬ್ಯಾನರ್ ಹರಿದ ಕಿಡಿಗೇಡಿಗಳು / ಕಾರ್ಯಕರ್ತರಲ್ಲಿ ಮಡುಗಟ್ಟಿದ ಆಕ್ರೋಶ

ದೊಡ್ಡಬಳ್ಳಾಪುರ, (ಜ.24): ಕಾಂಗ್ರೆಸ್ ಪ್ರಜಾದ್ವನಿ ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ಅಳವಡಿಸಲಾಗಿದ್ದ ಬೃಹತ್ ಬ್ಯಾನರ್ ಅನ್ನು ಕಿಡಿಗೇಡಿಗಳು ಸೋಮವಾರ ರಾತ್ರಿ ಹರಿದಿದ್ದು, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಇಂದು ಸಂಜೆ ನಾಲ್ಕು ಗಂಟೆಗೆ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಕಾಂಗ್ರೆಸ್ ಪ್ರಜಾದ್ವನಿ ಕಾರ್ಯಕ್ರಮ ಆಯೋಜಿಸಲಾಗಿದೆ. 

ಸಮಾವೇಶದಲ್ಲಿ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ,ಶಾಸಕ ಟಿ.ವೆಂಕರಮಣಯ್ಯರಾದಿಯಾಗಿ ಕಾಂಗ್ರೆಸ್‍ನ ರಾಜ್ಯ ಮುಖಂಡರು ಭಾಗಿಯಾಗುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಕಾರ್ಯಕ್ರಮಕ್ಕೆ ಸ್ವಾಗತ ಕೋರುವ ಬ್ಯಾನರ್, ಬಟಿಂಗ್ ಅಳವಡಿಸಲಾಗುತ್ತಿದೆ.

ಅಂತೆಯೇ ಪಿ.ಎಸ್.ಐ ಜಗದೀಶ್ ವೃತ್ತದಲ್ಲಿ 100X20 ಅಳತೆಯ ಬೃಹತ್ ಬ್ಯಾನರ್ ಅನ್ನು, ಸುಮಾರು 50ಮಂದಿ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಅಳವಡಿಸಿದ್ದರು. ಆದರೆ ಸೋಮವಾರ ರಾತ್ರಿ ಕಿಡಿಗೇಡಿಗಳು ಶಾಸಕ ಟಿ.ವೆಂಕಟರಮಣಯ್ಯ ಅವರ ಹೆಸರು ಕಾಣದಂತೆ ಹರಿದು ಹಾಕಿದ್ದಾರೆ. ಈ ವಿಚಾರ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಕ್ರೋಶ ಮಡುಗಟ್ಟಿದೆ.

ಈ ಕುರಿತಂತೆ ಮಾತನಾಡಿದ ಕಾರ್ಯಾಧ್ಯಕ್ಷ ಆಂಜನಮೂರ್ತಿ, ದೊಡ್ಡಬಳ್ಳಾಪುರ ತಾಲೂಕಿಗೆ ಹೊಸದಾದ ಅಹಿತಕರ ಬೆಳವಣಿಗೆ ಆರಂಭವಾಗಿದೆ. ಈ ಕುರಿತಂತೆ ಪೊಲೀಸ್ ಠಾಣೆಗೆ ದೂರು ನೀಡಿ ಕ್ರಮಕೈಗೊಳ್ಳಲು ಮನವಿ ಸಲ್ಲಿಸುತ್ತೇವೆ. ಅತೃಪ್ತ ಆತ್ಮಗಳಿಗೆ ಶಾಂತಿ ಕೋರುತ್ತೇವೆ ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

-->