ದೊಡ್ಡಬಳ್ಳಾಪುರ: ವಸತಿ ಯೋಜನೆ ಫಲಾನುಭವಿಗಳಿಗೆ ಬಾಕಿ ಅನುದಾನ ಬಿಡುಗಡೆಗೆ ಮನವಿ
ದೊಡ್ಡಬಳ್ಳಾಪುರ: ವಸತಿ ಯೋಜನೆ ಫಲಾನುಭವಿಗಳಿಗೆ ಬಾಕಿ ಅನುದಾನ ಬಿಡುಗಡೆಗೆ ಮನವಿ

ದೊಡ್ಡಬಳ್ಳಾಪುರ, (ಜ.24): ವಸತಿ ಯೋಜನೆ ಅಡಿ ಆಯ್ಕೆಯಾದ ಫಲಾನುಭವಿಗಳಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಬಾಕಿ ಉಳಿದ ಅನುದಾನ ಬಿಡುಗಡೆ ಮಾಡುವಂತೆ, ನಗರಸಭೆಯಿಂದ ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕವಿತಾ ಬಿ.ಮನ್ನಿಕೇರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಕುರಿತಂತೆ ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ಉಪಾಧ್ಯಕ್ಷೆ ನಗರಸಭೆ ಉಪಾಧ್ಯಕ್ಷೆ ಫರ್ಜಾನಾ ತಾಜ್, ಪೌರಾಯುಕ್ತ ಕೆ.ಜೆ.ಶಿವಶಂಕರ್ ನೇತೃತ್ವದಲ್ಲಿ ಮಂಗಳವಾರ ಬೆಂಗಳೂರಿನ ಕಚೇರಿಯಲ್ಲಿ ಭೇಟಿಯಾದರು.

ಈ ವೇಳೆ ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ಒಂದು ವರ್ಷದಿಂದ ವಸತಿ ಯೋಜನೆ ಅಡಿ ಆಯ್ಕೆಯಾದ ಫಲಾನುಭವಿಗಳಿಗೆ ರಾಜೀವ್ ಗಾಂಧಿ ವಸತಿ ನಿಗಮದ ಬಾಕಿ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕವಿತಾ ಬಿ.ಮನ್ನಿಕೇರಿ, ಬಾಕಿ‌ ಅನುದಾನವನ್ನು ಶೀಘ್ರದಲ್ಲಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....