ದೊಡ್ಡಬಳ್ಳಾಪುರ, (ಫೆ.04): ತಾಲೂಕಿನ ಬಾಶೆಟ್ಟಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಶ್ರೀರಾಮ ಆಸ್ಪತ್ರೆಯ ಮುಖ್ಯಸ್ಥ ಡಾ||ವಿಜಯ್ ಕುಮಾರ್, ಪರೀಕ್ಷೆಗೆ ದಿನಗಣನೆ ಆರಂಭವಾಗಿರುವ ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಇಂತಹ ಪುನಶ್ಚೇತನ ಕಾರ್ಯಾಗಾರಗಳು ಸಹಕಾರಿ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ ಮಾತನಾಡಿ, ಸತತ ಅಧ್ಯಯನದ ಮೂಲಕ ವಿದ್ಯಾರ್ಥಿಗಳು ಜ್ಞಾನಾರ್ಜನೆ ಮಾಡಿ ಹೆಚ್ಚು ಅಂಕ ಗಳಿಸಬೇಕು. ಚಂಚಲ ಮನಸ್ಸನ್ನು ನಿಯಂತ್ರಿಸಿ ದೈಹಿಕ, ಮಾನಸಿಕ, ನೈತಿಕ ಮತ್ತು ಆಧ್ಯಾತ್ಮಿಕವಾಗಿ ತಪಸ್ಸಿನಂತೆ ಅಧ್ಯಯನ ಮಾಡಿ ಯಶಸ್ಸು ಹೊಂದಬೇಕು ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಶಾಲೆಯ ಮುಖ್ಯಶಿಕ್ಷಕ ಆರ್.ನಾರಾಯಣ ಸ್ವಾಮಿ, ಸಂಪನ್ಮೂಲ ಶಿಕ್ಷಕರಾದ ಆರ್.ಎನ್.ಭಾಸ್ಕರ್, ಸುರೇಶ್, ನರಸಯ್ಯ ಸೇರಿದಂತೆ ಎಸ್.ಡಿ.ಎಂ.ಸಿ ಸದಸ್ಯರು, ಸ್ಥಳೀಯ ಮುಖಂಡರು ಹಾಜರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
others
others
politics
politics