ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆ ಅಡುಗೆ ಸಿಬ್ಬಂದಿಗೆ ಸನ್ಮಾನ..!!
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆ ಅಡುಗೆ ಸಿಬ್ಬಂದಿಗೆ ಸನ್ಮಾನ..!!

ದೊಡ್ಡಬಳ್ಳಾಪುರ, (ಫೆ.05): ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ - ಮದ್ಯಾಹ್ನ ಉಪಹಾರ ಯೋಜನೆಯ ಅಡುಗೆ ಸಿಬ್ಬಂದಿಗೆ ನಗರದ ಖಾಸಗಿ ಕಾಲ್ಯಾಣ ಮಂಟಪದಲ್ಲಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬಿಇಒ ಆರ್.ರಂಗಪ್ಪ ನೆರವೇರಿಸಿದ್ದು, ತಾಲೂಕು ಪಂಚಾಯಿತಿ ಇಒ ಶ್ರೀನಾಥ್ ಗೌಡ ಅಧ್ಯಕ್ಷತೆವಹಿಸಿದ್ದರು.

ಈ ಕಾರ್ಯಾಗಾರದಲ್ಲಿ 650 ಮಂದಿ ಸಿಬ್ಬಂದಿಗಳು ಭಾಗವಹಿಸಿದ್ದು, ಅಡುಗೆ ಮಾಡುವ ವೇಳೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ, ಶುಚಿತ್ವ, ಜವಬ್ದಾರಿ, ಮುನ್ನೆಚ್ಚರಿಕೆ, ಸುರಕ್ಷತೆ, ಆಹಾರ ಪದಾರ್ಥ ವ್ಯರ್ಥ ಮಾಡದಂತೆ ಸಲಹೆ ಮತ್ತಿತರ ವಿಚಾರಗಳ ಕುರಿತು ತರಬೇತಿ ನೀಡಲಾಯಿತು.

ಇದೇ ಸಂದರ್ಭದಲ್ಲಿ ವಯೋಕಾರಣ ನಿವೃತ್ತರಾದ ಅಡುಗೆ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.

ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ||ರುದ್ರೇಶ್, ಅಗ್ನಿಶಾಮಕ ದಳದ ಸಿಬ್ಬಂದಿ ಗಿರೀಶ್, ಖಾಸಗಿ ಅಡುಗೆ ಅನಿಲ ಸಂಸ್ಥೆಯ ರವಿ, ಬಮೂಲ್ ಅಧಿಕಾರಿ ಗೋಪಾಲ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜೈಕುಮಾರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ದ್ರಾಕ್ಷಾಯಿಣಿ, ಸಂಪನ್ಮೂಲ ವ್ಯಕ್ತಿ ಲೋಕೇಶ್  ಕ್ಷೇತ್ರ ಸಮನ್ವಯಾಧಿಕಾರಿ ಹನುಮಂತಪ್ಪ ಹಿಂದನಮನಿ, ಉಪನಿರ್ದೇಶಕರ ಕಚೇರಿ ಅಧಿಕಾರಿ ಲಲಿತಮ್ಮ ಮತ್ತಿತರರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....