ಭರತ ಹುಣ್ಣಿಮೆ: ಅರಳು ಮಲ್ಲಿಗೆ ಶ್ರೀ ಲಕ್ಷ್ಮೀ ಚೆನ್ನಕೇಶವಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ
ಭರತ ಹುಣ್ಣಿಮೆ: ಅರಳು ಮಲ್ಲಿಗೆ ಶ್ರೀ ಲಕ್ಷ್ಮೀ ಚೆನ್ನಕೇಶವಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

ದೊಡ್ಡಬಳ್ಳಾಪುರ: ಭರತ ಹುಣ್ಣಿಮೆ ಅಂಗವಾಗಿ ತಾಲೂಕಿನ ಅರಳು ಮಲ್ಲಿಗೆ ಗ್ರಾಮದ ಶ್ರೀ ಲಕ್ಷ್ಮೀ ಚೆನ್ನಕೇಶವಸ್ವಾಮಿ ದೇವಾಲಯದಲ್ಲಿ ಚೆನ್ನಕೇಶವಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಜನ್ಮೇಜಯ ಮಹರಾಜ ಸ್ಥಾಪಿಸಿರುವ ಸುಮಾರು 600 ವರ್ಷ ಇತಿಹಾಸ ಉಳ್ಳ ದೇವಾಲಯ ಇದಾಗಿದ್ದು, ಶ್ರಾವಣ ಶನಿವಾರ, ಮಾಘ ಶುದ್ಧ ಪೌರ್ಣಮಿ (ಭರತ ಹುಣ್ಣಿಮೆ)  ಮತ್ತಿತರರ ವಿಶೇಷ ದಿನಗಳಲ್ಲಿ ವಿಶೇಷ ಪೂಜೆ ಕಾರ್ಯಕ್ರಮ ನಡೆಸಲಾಗುತ್ತದೆ‌.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--