ಚಿಕ್ಕಬಳ್ಳಾಪುರದಲ್ಲಿ ಸಮ್ಮೇಳನ: ಉಪಹಾರಕ್ಕೆ ಪರದಾಡಿದ ಫಲಾನುಭವಿಗಳು
ಚಿಕ್ಕಬಳ್ಳಾಪುರದಲ್ಲಿ ಸಮ್ಮೇಳನ: ಉಪಹಾರಕ್ಕೆ ಪರದಾಡಿದ ಫಲಾನುಭವಿಗಳು

ಚಿಕ್ಕಬಳ್ಳಾಪುರ, (ಮಾ.27): ಸೋಲಾಲಪ್ಪನದಿನ್ನೆಯಲ್ಲಿ ಏರ್ಪಡಿಸಲಾಗಿದ್ದ ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆ, ಬೃಹತ್ ಫಲಾನುಭವಿಗಳ ಸಮ್ಮೇಳನ, ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಹಾಗೂ ನಂದಿ ಬೆಟ್ಟ ರೋಪ್ ವೇ ಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಬಂದಿದ್ದ ಫಲಾನುಭವಿಗಳು, ಉಪಹಾರಕ್ಕೆಂದು ಸೂಕ್ತ ವ್ಯವಸ್ಥೆ ಮಾಡದ ಕಾರಣ ಪರದಾಡುವಂತಾಗಿತ್ತು.

ಇನ್ನೂ ಕಾರ್ಯಕ್ರಮದ ಕುರಿತಂತೆ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ‌, ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಆಗಬೇಕು ಎನ್ನುವ  ಅಭಿಲಾಷೆಯಿಂದ ನಮ್ಮ ಪ್ರಧಾನಿಗಳು ನಿಯಮ ಸರಳಿಕರಣಗೊಳಿಸಿದ್ದರಿಂದ,  ಹಿಂದುಳಿದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು  ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು. 

ಚಿಕ್ಕಬಳ್ಳಾಪುರ, ಹಾವೇರಿ, ಯಾದಗಿರಿ, ಚಿಕ್ಕಮಗಳೂರು ಮೆಡಿಕಲ್ ಕಾಲೇಜು ಅಭಿವೃದ್ಧಿ ಮಾಡಲಾಗಿದೆ. ರಾಮನಗರದಲ್ಲಿಯೂ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು ಎಂದರು. 

ಶಂಕರ್ ನಾಗ್ ಕನಸು ನನಸು: ನಂದಿಬೆಟ್ಟಕ್ಕೆ ರೋಪ್ ವೇ ಆಗಬೇಕೆಂದು ದಿವಂಗತ ನಟ  ಶಂಕರನಾಗ್ ಅವರು ಕಂಡ ಕನಸು ಈಗ ನನಸಾಗುತ್ತಿದೆ. ರೋಪ್ ವೇ ಮಾಡಿದರೆ  ಪ್ರವಾಸೋದ್ಯಮಕ್ಕೆ ಸಾಕಷ್ಟು ಅನುಕುಲವಾಗುತ್ತದೆ‌. ಈ ಭಾಗದಲ್ಲಿ  ಸಾಕಷ್ಟು  ಪ್ರವಾಸಿ ತಾಣಗಳಿವೆ. ನಂದಿ ಬೆಟ್ಟದ  ಪಕ್ಕದ ದೇವಸ್ಥಾನ ಅಭಿವೃದ್ಧಿ ಆಗುತ್ತದೆ. ಆದ್ದರಿಂದ ಇದೊಂದು ಪ್ರವಾಸಿ ಸರ್ಕಿಟ್ ಆಗಲು ಅನುಕೂಲವಾಗಲಿದೆ ಎಂದರು. 

ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ವಿಶ್ವಾಸ: ನಮ್ಮ ಯೋಜನೆಗಳ ಬಗ್ಗೆ ಜನರಿಗೆ ವಿಶ್ವಾಸ ಮೂಡಿದೆ‌. ಇದರಿಂದ ನಮ್ಮ‌ಆತ್ಮವಿಶ್ವಾಸ ಹೆಚ್ಚಾಗಿದೆ‌.

ಅಮಿತ್ ಶಾ ಅವರ ಸಭೆಯಲ್ಲಿ ಪ್ರಣಾಳಿಕೆಯ ಬಗ್ಗೆ ಚರ್ಚೆ ಮಾಡಿದ್ದೇವೆ. ಆರೋಗ್ಯ ಸಚಿವ ಸುಧಾಕರ್ ಅವರು ಪ್ರಾಣಾಳಿಕೆ  ಸಮಿತಿ  ಅಧ್ಯಕ್ಷರಾಗಿದ್ದಾರೆ. ಈ ಬಾರಿ ನಮ್ಮದು ಜನತಾ ಪ್ರಣಾಳಿಕೆಯಾಗಲಿದೆ ಎಂದರು. 

ಮೀಸಲಾತಿ ಹೆಚ್ಚಳ ಕಾಂಗ್ರೆಸ್ ಗೆ ಸಹಿಸಲಾಗುತ್ತಿಲ್ಲ: ಮೀಸಲಾತಿ ಹೆಚ್ಚಳ ಮಾಡಿರುವುದು ಕಾಂಗ್ರೆಸ್ ನವರಿಗೆ ಸಹಿಸಲಿಕ್ಕೆ ಆಗುತ್ತಿಲ್ಲ. ಹೀಗಾಗಿ ಅವರು ವಿರೋಧ ಮಾಡುತ್ತಿದ್ದಾರೆ. ನಾವು ಯಾವ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆಯೋ ಅದನ್ನು ವಿರೋಧಿಸುತ್ತೇವೆ ಎಂದು ಹೇಳಲಿ.

ಮುಸ್ಲಿಮರಿಗೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಅವರನ್ನು ಇಡಬ್ಲುಎಸ್ ವರ್ಗದಲ್ಲಿ ಸೇರಿಸಿದ್ದೇವೆ. ಅಲ್ಲಿ ಶೆ 10% ಮೀಸಲಾತಿ ಇದೆ. ನಮ್ಮ ಸಂವಿಧಾನದಲ್ಲಿ  ಧಾರ್ಮಿಕ ಆಧಾರದಲ್ಲಿ ಮಿಸಲಾತಿ ಇಲ್ಲ. ಮುಸ್ಲೀಮರಿಗೆ ಯಾವುದೇ ರೀತಿಯ ಅನ್ಯಾಯ ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದರು.

ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ ನಾಗರಾಜ್,    ಸಚಿವ ಆರ್. ಅಶೋಕ್,  ಎಸ್.ಮುನಿಸ್ವಾಮಿ, ಶಾಸಕರಾದ  ಕೃಷ್ಣಾರೆಡ್ಡಿ, ವೈ.ಎನಾರಾಯಣ ಸ್ವಾಮಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ:ಎಂ.ಕೆ.ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

-->