ಮಾ.28 ರಂದು ದೊಡ್ಡಬಳ್ಳಾಪುರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ‌..!
ಮಾ.28 ರಂದು ದೊಡ್ಡಬಳ್ಳಾಪುರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ‌..!

ದೊಡ್ಡಬಳ್ಳಾಪುರ (ಮಾ.27): ಕಾರ್ಮಿಕರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ “ಶ್ರಮಿಕ ನಿವಾಸ” ವಸತಿ ಸಮುಚ್ಚಯ ಉದ್ಘಾಟನಾ ಸಮಾರಂಭವನ್ನು ಮಾರ್ಚ್ 28 ರಂದು ಬೆಳಿಗ್ಗೆ 10 ಗಂಟೆಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಓಬದೇನಹಳ್ಳಿಯಲ್ಲಿ ಏರ್ಪಡಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ.ಎಸ್.ಬೊಮ್ಮಾಯಿ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಕೆ.ಸುಧಾಕರ್, ಪೌರಾಡಳಿತ, ಸಣ್ಣ ಕೈಗಾರಿಕೆಗಳ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜ್(ಎಂ.ಟಿ.ಬಿ), ಕಾರ್ಮಿಕ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಮಂಡಳಿಯ ಅಧ್ಯಕ್ಷರರಾದ ಅರಬೈಲ್ ಶಿವರಾಮ ಹೆಬ್ಬಾರ ಅವರ ಘನ ಉಪಸ್ಥಿತಿಯಲ್ಲಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ವೆಂಕಟರಮಣಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ದೇವನಹಳ್ಳಿಯ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಎ.ರವಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ||ಕೆ.ಶ್ರೀನಿವಾಸಮೂರ್ತಿ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ.ಎಲ್.ಎನ್. ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರುಗಳಾದ ಪುಟ್ಟಣ್ಣ, ಅ.ದೇವೇಗೌಡ, ಎಸ್.ರವಿ, ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕ.ನ.ನೀ.ಸ. ಮತ್ತು ಒ.ಚ. ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಕೆ.ಪಿ.ಮೋಹನ್ ರಾಜ್, ಕಾರ್ಮಿಕ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ಎನ್.ವಿ ಪ್ರಸಾದ್, ಕಾರ್ಮಿಕ ಆಯುಕ್ತ ಅಕ್ರಂ ಪಾಷ, ಕ.ಕ ಮತ್ತು ಇ.ನಿ.ಕಾ.ಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಕಾರ್ಯದರ್ಶಿ ಗುರುಪ್ರಸಾದ್ ಎಂ.ಪಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ರವಿ.ಎಂ.ತಿರ್ಲಾಪುರ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿ ಮೋಹನಕುಮಾರಿ ಸೇರಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಮಂಡಳಿಯ ಗೌರವಾನ್ವಿತ ಸದಸ್ಯರು ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಮುಖಂಡರು ಮತ್ತು ಕಾರ್ಮಿಕ ಬಂಧುಗಳು ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....