ಕುಮಾರಸ್ವಾಮಿ ಮುಖ್ಯಮಂತ್ರಿಯಾಗದೇ ಇದ್ದರೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ: ದೊಡ್ಡಬಳ್ಳಾಪುರದಲ್ಲಿ ಸಿ.ಎಂ.ಇಬ್ರಾಹಿಂ ಹೇಳಿಕೆ
ಕುಮಾರಸ್ವಾಮಿ ಮುಖ್ಯಮಂತ್ರಿಯಾಗದೇ ಇದ್ದರೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ: ದೊಡ್ಡಬಳ್ಳಾಪುರದಲ್ಲಿ ಸಿ.ಎಂ.ಇಬ್ರಾಹಿಂ ಹೇಳಿಕೆ

ದೊಡ್ಡಬಳ್ಳಾಪುರ, (ಮಾ.27): ಕಾಂಗ್ರೆಸ್ ಪಕ್ಷದ ಮುಖಂಡರು ಮೀಸಲಾತಿ ವಿಚಾರವಾಗಿ ಮಾತನಾಡುವ ನೈತಿಕತೆಯನ್ನು ಕಳೆದು ಕೊಂಡಿದ್ದಾರೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.

ಅವರು ನಗರದಲ್ಲಿ ಸೋಮವಾರ ಜೆಡಿಎಸ್ ಅಲ್ಪಸಂಖ್ಯಾತರ ಘಟಕದವತಿಯಿಂದ ಇಸ್ಲಾಂಪುರದಲ್ಲಿ ಏರ್ಪಡಿಸಿದ್ದ ಇಫ್ತಾರ್ ಕೂಟದಲ್ಲಿ ಮಾತನಾಡಿದರು.

ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಮುಸ್ಲಿಂ ಸಮುದಾಯಕ್ಕೆ ಶೇ.4ರಷ್ಟು ಮೀಸಲಾತಿ ನೀಡಿದ್ದರು. ಈಗಿನ ಬಿಜೆಪಿ ಸರ್ಕಾರ ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ರದ್ದು ಮಾಡಿ ಇತರೆ ಜನಾಂಗದವರಿಗೆ ನೀಡಿದ್ದಾರೆ. ಮೃದು ಹಿಂದೂತ್ವ ವಾದ ಪಾಲಿಸುತ್ತಿರುವ ಕಾಂಗ್ರೆಸ್ ಮೀಸಲಾತಿಯ ವಿರುದ್ಧ ಧ್ವನಿ ಎತ್ತುವ ಅರ್ಹತೆಯನ್ನೇ ಕಳೆದುಕೊಂಡಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ ನ್ಯಾಯಯುತವಾಗಿ ದೊರೆಯಬೇಕಿರುವ ಮೀಸಲಾತಿ ಪಡೆಯಬೇಕಿದ್ದರೆ ರಾಜ್ಯದಲ್ಲಿ ಮತ್ತೆ  ಜೆಡಿಎಸ್ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬರಬೇಕಿದೆ ಎಂದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜ್ಯದಲ್ಲಿ ಹತ್ತಾರು ಬಾರಿ ರೋಡ್ ಶೋ ನಡೆಸಿದರು ಯಾರೂ ಸಹ  ಭಯಪಡುವುದಿಲ್ಲ. ಆದರೆ ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡರು ಒಮ್ಮೆ ರೋಡ್ ಶೋ ನಡೆಸಿರುವುದಕ್ಕೆ ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷದ ನಾಯಕರ ಎದೆಯಲ್ಲಿ ನಡುಕು ಆರಂಭವಾಗಿದೆ. ಹಿಜಾಬ್ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಒಮ್ಮೆಯೂ ಮಾತನಾಡಿಲ್ಲ.

ಈ ಬಗ್ಗೆ ನನ್ನನ್ನು ಮಾತನಾಡದಂತೆ ತಡೆದರು. ಆದರೆ ಈ ಬಗ್ಗೆ ಕಾಂಗ್ರೆಸ್ ಮುಖಂಡರಿಗೆ ಭಯಪಡದೇ ಮಾತನಾಡಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಗ್ಯಾರೆಂಟಿ ಕಾರ್ಡ್ ನಾಟಕ ಪ್ರಾರಂಭಿಸಿದೆ. ಈ ಗ್ಯಾರಂಟಿ ಕಾರ್ಡ್ಗೆ ಯಾವುದೇ ವಾರಂಟಿಯು ಇಲ್ಲದಾಗಿದೆ. ದಕ್ಷಿಣ ಭಾರತದ ರಾಜ್ಯಗಲ್ಲಿ ರಾಸ್ಟ್ರೀಯ ಪಕ್ಷಗಳಿಗೆ ನೆಲೆ ಇಲ್ಲದಾಗಿವೆ. ಈ ಬಾರಿಯ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲೂ ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷಗಳನ್ನು ಮತದಾರರು ಸೋಲಿಸಲಿದ್ದಾರೆ ಎಂದರು.

ಬಿಜೆಪಿ, ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಯಾರು ಎನ್ನುವುದನ್ನು ಹೇಳಲಾಗದೆ ಇನ್ನೂ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಜೆಡಿಎಸ್ ಪಕ್ಷದಲ್ಲಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗದೇ ಇದ್ದರೆ ಜೆಡಿಎಸ್ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ದೊಡ್ಡಬಳ್ಳಾಪುರ ವಿಧಾನ ಕ್ಷೇತ್ರದಿಂದ ಈ ಬಾರಿ ಮುನೇಗೌಡ ಅವರು ಶಾಸಕರಾಗುವುದು ನಿಶ್ಚಿತವಾಗಿದೆ ಎಂದರು.

ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಮಾತಾನಾಡಿ, ಮೂರು ಬಾರಿ ಸೋಲು ಕಂಡಿದ್ದರು ಸಹ ಕ್ಷೇತ್ರದಲ್ಲಿನ ಮತದಾರರ ಸೇವೆ ಮಾಡಿದ್ದೇನೆ. ಇದು ನನ್ನ ಕೊನೆಯ ಚುನಾವಣೆಯಾಗಿದೆ. ಈ ಬಾರಿ ಕ್ಷೇತ್ರದಲ್ಲಿ ಮತದಾರರ ಒಲವು ಜೆಡಿಎಸ್ ಪರವಾಗಿದೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ರಾಷ್ಟ್ರೀಯ ಕಾರ್ಯದರ್ಶಿ ಜಫೀರ್ ಉಲ್ಲಾಖಾನ್, ಅಬ್ದುಲ್ ರಹುಫ್, ಫಯಾಜ್, ಆರೀಫ್, ನಗರಸಭೆ ಉಪಾಧ್ಯಕ್ಷೆ  ಫರ್ಹಾನಾತಾಜ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎಚ್.ಜಿ.ವಿಜಯ್ ಕುಮಾರ್, ಹರೀಶ್ ಗೌಡ, ತಾಲೂಕು ಅಧ್ಯಕ್ಷ ಲಕ್ಷ್ಮೀಪತಿ, ಮುಖಂಡರಾದ ಇ.ಕೃಷ್ಣಪ್ಪ, ಹೆಚ್.ಅಪ್ಪಯ್ಯಣ್ಣ, ಪದ್ಮಾವತಿ ಮುನೇಗೌಡ, ಟಿಎಪಿಎಂಸಿಎಸ್ ಅಧ್ಯಕ್ಷ ವಿ.ಅಂಜನೇಗೌಡ, ನಗರಸಭೆ ಹಿರಿಯ ಸದಸ್ಯ ತ.ನ.ಪ್ರಭುದೇವ್, ಚಂದ್ರಶೇಖರ, ತಳವಾರ ನಾಗರಾಜ್, ವಕ್ತಾರ ಕುಂಟನಹಳ್ಳಿ ‌ಮಂಜುನಾಥ್ ಮುಸ್ಲಿಂ ಸಮುದಾಯದ ಮುಖಂಡರು ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

literature

HL

politics

HL

health

HL

crime

HL

crime

HL

health

HL

crime

HL

politics

HL

politics

HL

politics

HL

politics

HL

politics

HL

others

HL

politics

HL

politics

HL

crime

HL

crime

HL

politics

HL

literature

HL

literature

HL

politics

HL

others

HL

politics

HL

crime

HL

others

HL

crime

HL

politics

HL

politics

HL

others

HL

literature