ತಿಗಳ ಸಮುದಾಯದ ಅಭಿವೃದ್ಧಿಗೆ ನಿಗಮ ಸ್ಥಾಪನೆ: ಅಶ್ವತ್ಥನಾರಾಯಣ
ತಿಗಳ ಸಮುದಾಯದ ಅಭಿವೃದ್ಧಿಗೆ ನಿಗಮ ಸ್ಥಾಪನೆ: ಅಶ್ವತ್ಥನಾರಾಯಣ

ಬೆಂಗಳೂರು, (ಮಾ.28): ಸರಕಾರವು ತಿಗಳ ಸಮುದಾಯದ ಶ್ರೇಯೋಭಿವೃದ್ಧಿಗೆ ಬದ್ಧವಾಗಿದ್ದು, ಇದಕ್ಕಾಗಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದೆ. ಸಮಾಜದ ದುರ್ಬಲ ಸಮುದಾಯಗಳಿಗೆ ಸಾಮಾಜಿಕ ಮತ್ತಿತರ ಮನ್ನಣೆ ದೊರಕಿಸಿ ಕೊಡುವ ಕೆಲಸವನ್ನು ಈ ಮೂಲಕ ಮಾಡಲಾಗುತ್ತಿದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಸರಕಾರದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಅಗ್ನಿಬನ್ನಿರಾಯಸ್ವಾಮಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಗರ ಮತ್ತು ಗ್ರಾಮೀಣ ಪ್ರದೇಶ ಎರಡರಲ್ಲೂ ಕಂಡುಬರುವ ತಿಗಳ ಸಮುದಾಯದ ಸಬಲೀಕರಣ ಅಗತ್ಯವಾಗಿದೆ. ಇದರ ಅಂಗವಾಗಿ ಅಧ್ಯಯನ ಕೇಂದ್ರ ಮತ್ತು ಕರಗ ಭವನ‌ ನಿರ್ಮಾಣಕ್ಕೆ ಕೂಡ ಅಗತ್ಯ ಅನುದಾನ ಒದಗಿಸಲಾಗಿದೆ ಎಂದು ಅವರು ತಿಳಿಸಿದರು.

ತಿಗಳರು ಹೂವು ಮಾರಾಟದಿಂದ ಹಿಡಿದು ಅನೇಕ ಅಸಂಘಟಿತ ಕಸುಬುಗಳಲ್ಲಿ ತೊಡಗಿ ಕೊಂಡಿದ್ದಾರೆ. ಇದನ್ನು ಉಳಿಸಿಕೊಂಡು ಹೋಗಬೇಕು. ಜೊತೆಗೆ ಸಮುದಾಯದ ಯುವಜನರು ಆಧುನಿಕ ಉದ್ಯೋಗ ಅವಕಾಶಗಳನ್ನು ತಮ್ಮದನ್ನಾಗಿ ಮಾಡಿಕೊಳ್ಳಬೇಕು ಎಂದು ಅವರು ಸೂಚಿಸಿದರು.

ಸಮುದಾಯದಲ್ಲಿ ಸಂಘಟನೆಯ ಬಲವಿದೆ. ಹೀಗಿದ್ದರೆ, ಬರಬಹುದಾದ ಸಮಸ್ಯೆಗಳನ್ನು ಸಮರ್ಥವಾಗಿ ಬಗೆಹರಿಸಿ ಕೊಳ್ಳಬಹುದು ಎಂದು ಅವರು ನುಡಿದರು.

ಕಾರ್ಯಕ್ರಮದಲ್ಲಿ ಸಮುದಾಯದ ಸ್ವಾಮೀಜಿಗಳು, ಮುಖಂಡ ರಮೇಶ್ ಮುಂತಾದವರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

crime

HL

economy

HL

others

HL

crime

HL

others

HL

politics

HL

others

HL

economy

HL

others

HL

agriculture

HL

others

HL

economy

HL

crime

HL

others

HL

politics

HL

others

HL

politics

HL

crime

HL

others

HL

education

HL

politics

HL

others

HL

others

HL

crime

HL

economy

HL

travel

HL

others

HL

literature

HL

politics