ಹವಾಮಾನ ವರದಿ: ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಮಂಗಳವಾರ ಸಂಜೆ ಚಂಡಮಾರುತ ಎದ್ದಿದೆ ಎನ್ನುವುದನ್ನು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಚಂಡಮಾರುತಕ್ಕೆ 'ಬೀಪೋರ್ಜೊಯ್' ಎನ್ನುವ ಹೆಸರನ್ನು ಬಾಂಗ್ಲಾದೇಶ ಇಟ್ಟಿದೆ.
ಈ ಚಂಡಮಾರುತ ಆಗ್ನೇಯ ಮತ್ತು ಪಕ್ಕದ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಲ್ಲಿ ಗಂಟೆಗೆ ನಾಲ್ಕು ಕಿಲೋಮೀಟರ್ ವೇಗದಲ್ಲಿ ಉತ್ತರದ ಕಡೆಗೆ ಚಲಿಸುತ್ತಿದೆ ಎಂದು IMD ವರದಿ ತಿಳಿಸಿದೆ.
ಇದು ಬಹುತೇಕ ಉತ್ತರದ ಕಡೆಗೆ ಚಲಿಸುವ ಸಾಧ್ಯತೆಯಿದ್ದು, ಕ್ರಮೇಣ ತೀವ್ರ ರೂಪ ಪಡೆಯುವ ಸಾಧ್ಯತೆ ಇದೆ. ಚಂಡಮಾರುತದ ಹಿನ್ನೆಲೆಯಲ್ಲಿ ಕೊಂಕಣ-ಗೋವಾ-ಮಹಾರಾಷ್ಟ್ರ ಕರಾವಳಿಯಲ್ಲಿ ಜೂನ್ 8 ರಿಂದ 10 ರವರೆಗೆ ಅತಿ ಎತ್ತರದ ಅಲೆಗಳು ಏಳುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿದ ಮೀನುಗಾರರು ಮರಳುವಂತೆ ಸೂಚಿಸಲಾಗಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಇಂದಿನಿಂದ ಮೂರು ದಿನ 4 ರಾಜ್ಯಗಳ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕ ಕೇರಳ ಮಹಾರಾಷ್ಟ್ರ ಗುಜರಾತ್ನಲ್ಲಿ ಭಾರಿ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೀಪೋರ್ಜೊಯ್ ಚಂಡಮಾರುತದ ಅಬ್ಬರ ಜೋರಾಗಿದೆ. ಹೀಗಾಗಿ ಮುಂಗಾರುಮಳೆಗೂ ಅಡ್ಡಿಯಾಗುವ ಸಾಧ್ಯತೆ ಇದ್ದು, ಮುಂಗಾರು ಪ್ರವೇಶ ಮತ್ತಷ್ಟು ವಿಳಂಬವಾಗಲಿದೆ. ಅಲ್ಲದೆ ಬೀಪೋರ್ಜೊಯ್ ಚಂಡಮಾರುತದಿಂದ ಸಮುದ್ರದಲ್ಲಿ ಭಾರಿ ಅಲೆಗಳು ಸೃಷ್ಟಿಯಾಗುವ ಸಾಧ್ಯತೆ ಇದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ರಾಷ್ಟ್ರೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
others
others
crime
others