ಬೆಂಗಳೂರು, (ಜೂ, 07): ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ಜಾನುವಾರು ಹತ್ಯೆ ಕಾಯ್ದೆ ತಿದ್ದುಪಡಿ ಮೊದಲಾದವುಗಳ ಮರುಪರಿಶೀಲನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಇಂದು ತಮ್ಮನ್ನು ಭೇಟಿ ಮಾಡಿದ ವಿವಿಧ ರೈತ ಮುಖಂಡರ ಜೊತೆ ಮಾತುಕತೆ ನಡೆಸಿದರು.
ಕೇಂದ್ರ ಸರ್ಕಾರವು ಕಾರ್ಪೊರೇಟ್ ಕೃಷಿಯನ್ನು ಪರಿಚಯಿಸುವುದರಿಂದ ಶೇ. 85 ಕ್ಕೂ ಹೆಚ್ಚಿನ ಪ್ರಮಾಣದಲ್ಲಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ತೊಂದರೆಯಾಗಲಿದೆ ಎಂದು ರೈತ ಮುಖಂಡರು ಆತಂಕ ವ್ಯಕ್ತಪಡಿಸಿದರು.
ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವ ನೀತಿ, ನಿಯಮಾವಳಿಗಳ ಕುರಿತು ವಿವರವಾಗಿ ಪ್ರತ್ಯೇಕವಾಗಿ ಚರ್ಚಿಸಲು ಪ್ರತ್ಯೇಕ ಸಭೆ ನಡೆಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಬಡಗಲಪುರ ನಾಗೇಂದ್ರ, ಚಾಮರಸ ಮಾಲಿ ಪಾಟೀಲ್, ಜಿ.ಸು.ಬೈಯ್ಯಾ ರೆಡ್ಡಿ , ಎಚ್.ಆರ್.ಬಸವರಾಜಪ್ಪ ಸೇರಿದಂತೆ ಹಲವಾರು ಮುಖಂಡರು ನಿಯೋಗದಲ್ಲಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
others
others
others
others