ಬೆಂಗಳೂರು, (ಜೂ.07): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ರಾಜ್ಯ ಸರಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಿಸಿ ಮಂಗಳವಾರ ಸಂಜೆ ಆದೇಶ ಹೊರಡಿಸಿತ್ತು.
1998ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ನಿಂಬಾಳ್ಕರ್ ಅವರು ಪೊಲೀಸ್ ಇಲಾಖೆಯ ವಿವಿಧ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ನಿಂಬಾಳ್ಕರ್ ಅವರಿಗೆ ಇಲಾಖೆಯ ಅಧಿಕಾರಿಗಳು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.
ನಂತರ ಆಯುಕ್ತರು ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
others
others
others
others