ಹಜ್‌ ಭವನ ನಿರ್ಮಾಣಕ್ಕೆ ಅನುದಾನ; ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕಾನೂನು ಕ್ರಮ - ಸಚಿವ ಜಮೀರ್‌ ಅಹಮದ್‌ ಖಾನ್‌
ಹಜ್‌ ಭವನ ನಿರ್ಮಾಣಕ್ಕೆ ಅನುದಾನ; ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕಾನೂನು ಕ್ರಮ - ಸಚಿವ ಜಮೀರ್‌ ಅಹಮದ್‌ ಖಾನ್‌

ಬೆಂಗಳೂರು, (ಜೂ.09): ‘ನನ್ನ ಹೆಸರನ್ನು ಬಳಸಿಕೊಂಡು ಸುಳ್ಳು ಸುದ್ದಿ ಸೃಷ್ಟಿಸಿ, ಸಮಾಜದಲ್ಲಿ ಅಶಾಂತಿ ಉಂಟುಮಾಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುತ್ತೇನೆ’ ಎಂದು ವಸತಿ ಸಚಿವ ಬಿ.ಜಡ್.ಜಮೀರ್‌ ಅಹಮದ್ ಖಾನ್‌ ಎಚ್ಚರಿಕೆ ನೀಡಿದ್ದಾರೆ.

‘ಹಜ್‌ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರೂ 5,000 ಕೋಟಿ ಅನುದಾನ ನೀಡಿದ್ದಾರೆ’ ಎಂಬುದಾಗಿ ಸಚಿವರು ಹೇಳಿಕೆ ನೀಡಿರುವ ರೀತಿಯಲ್ಲಿ ಸುದ್ದಿಯ ತುಣುಕು ಸೃಷ್ಟಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಟ್ಟಿರುವ ಕುರಿತು ಗುರುವಾರ ಪ್ರತಿಕ್ರಿಯೆ ನೀಡಿರುವ ಅವರು, ‘ನಾನು ಅಂತಹ ಹೇಳಿಕೆಯನ್ನೇ ನೀಡಿಲ್ಲ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಕೆಲವರು ಸುಳ್ಳು ಸುದ್ದಿ ಸೃಷ್ಟಿಸಿ, ಹರಿಯಬಿಟ್ಟಿದ್ದಾರೆ’ ಎಂದು ಹೇಳಿದ್ದಾರೆ.

ಪ್ರಕರಣದ ಕುರಿತು ಶುಕ್ರವಾರ ಪೊಲೀಸರಿಗೆ ದೂರು ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....