ವಿಶ್ವಕಪ್: ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತ ಮೊದಲು ಬ್ಯಾಟಿಂಗ್
ವಿಶ್ವಕಪ್: ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತ ಮೊದಲು ಬ್ಯಾಟಿಂಗ್

ಅಹಮದಾಬಾದ್, (ನ.19): ಇಲ್ಲಿನ ನರೇಂದ್ರ ಮೋದಿ‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ V/S ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವಕಪ್‌ ಏಕದಿನ ಫೈನಲ್ ಪಂಧ್ಯದಲ್ಲಿ ಟಾಸ್ ಗೆದ್ದ ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

45 ದಿನಗಳು ಮತ್ತು 47 ಪಂದ್ಯಗಳ ಸುದೀರ್ಘ ಪ್ರಯಾಣದ ನಂತರ ಅಂತಿಮವಾಗಿ ಎಲ್ಲರೂ ಕಾಯುತ್ತಿದ್ದ ದಿನ ಬಂದಿದೆ. 2023ರ ವಿಶ್ವಕಪ್‌ನ ಫೈನಲ್ ಪಂದ್ಯ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ.

ಎರಡು ಬಾರಿಯ ಚಾಂಪಿಯನ್ ಭಾರತ, ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸುತ್ತಿದ್ದು, ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಎಲ್ಲಾ 10 ಪಂದ್ಯಗಳನ್ನು ಗೆಲ್ಲುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದ್ದರೆ, ಭಾರತ ಸೇರಿದಂತೆ ಮೊದಲ 2 ಪಂದ್ಯಗಳನ್ನು ಸೋತ ಆಸ್ಟ್ರೇಲಿಯಾ, ಸತತ 8 ಪಂದ್ಯಗಳನ್ನು ಗೆದ್ದು ಫೈನಲ್‌ ಪ್ರವೇಶಿದೆ.

ತಂಡಗಳು

ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಲಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್, ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--