ಬೆಂಗಳೂರು, (ನ.19); ಪ್ರತಿ ಮನೆಗೆ ಹೋಗಿ ಗ್ಯಾರಂಟಿ ಯೋಜನೆಗಳು ತಲುಪಿದೆಯೇ, ಇಲ್ಲವೇ ಅಥವಾ ಏನಾದರೂ ಬದಲಾವಣೆ ಮಾಡಬೇಕಾ ಅಂತಾ ಮಾಹಿತಿ ಸಂಗ್ರಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳು ತಲುಪಿದೆಯೋ ಇಲ್ಲವೋ ಎಂದು ಪರಿಶೀಲನೆಗೆ ನ.28ರಂದು ಸಮಿತಿ ರಚನೆ ಮಾಡುತ್ತೇವೆ. ಗ್ಯಾರೆಂಟಿಗಳ ಮೇಲ್ವಿಚಾರಣೆಗೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಜವಾಬ್ದಾರಿ ನೀಡಿದ್ದೇವೆ ಎಂದರು.
ಕಾಂಗ್ರೆಸ್ ಅಧಿಕಾರದಲ್ಲಿ ಇರುವವರೆಗೆ ಗ್ಯಾರಂಟಿಗಳನ್ನು ತೆಗೆಯಲ್ಲ. ಗ್ಯಾರಂಟಿ ಯೋಜನೆಗಳನ್ನು ಬದಲಾವಣೆ ಮಾಡಲ್ಲ, ಇದು ನಿಶ್ಚಿತ. ಜನವರಿ ವೇಳೆಗೆ ಯುವ ನಿಧಿ ಯೋಜನೆಯನ್ನೂ ಜಾರಿಗೆ ತರುತ್ತೇವೆ. ಬಿಜೆಪಿ, ಜೆಡಿಎಸ್‌ಗೆ ಮತಹಾಕಿದ್ರೆ ಗ್ಯಾರಂಟಿ ಯೋಜನೆ ರದ್ದು ಮಾಡ್ತಾರೆಂದು, ಮನೆಮನೆಗೆ ಭೇಟಿ ವೇಳೆ ಮನವರಿಕೆ ಮಾಡಿಕೊಡಬೇಕು ಎಂದು ಕಾರ್ಯಕರ್ತರಿಗೆ ಸೂಚಿಸಿದರು.
ನವೆಂಬರ್ 17ರವರೆಗೆ ಶಕ್ತಿ ಯೋಜನೆಯಡಿ 100 ಕೋಟಿ ಟಿಕೆಟ್ ನೀಡಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ದಿವಾಳಿ ಆಗುತ್ತೆ ಅಂತಾ ಬಿಜೆಪಿ ಹೇಳುತ್ತಿತ್ತು. ಈಗ ಬಿಜೆಪಿಯವರೇ ಗ್ಯಾರಂಟಿ ಯೋಜನೆ ನೀಡಲು ಹೊರಟಿದ್ದಾರೆ. ಹಾಸನಾಂಬೆ ಜಾತ್ರೆ ವೇಳೆ 08ಕೋಟಿ ರೂ. ಆದಾಯ ಬಂದಿದೆ. ಮಹಿಳೆಯರಿಗೆ ಉಚಿತ ಬಸ್ ನೀಡಿದ್ದರಿಂದ ಹೆಚ್ಚು ಆದಾಯ ಬಂದಿದೆ.
ತಾಂತ್ರಿಕ ಕಾರಣದಿಂದ ಶೇ 7 ರಷ್ಟು ಜನರಿಗೆ ಗೃಹಲಕ್ಷ್ಮೀ ಯೋಜನೆ ಹಣ ತಲುಪಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
agriculture
others
others
politics
politics