ನೆಲಮಂಗಲ, (ನ.19): ಗ್ರಾಮ ಪಂಚಾಯಿತಿ ಕಚೇರಿ ಬಾಗಿಲಿನ ಬೀಗ ಮುರಿದು ನುಗ್ಗಿರುವ ಕಳ್ಳರು ಕಡತ, ಸಿಸಿಕ್ಯಾಮರಾ ಡಿವಿಆರ್ ಕಳವು ಮಾಡಿದ ಘಟನೆ ತಾಲೂಕಿನ ಯಂಟಗಾನಹಳ್ಳಿಯಲ್ಲಿ ನಡೆದಿದೆ.
ಸ್ಥಳಕ್ಕೆ ಆಗಮಿಸಿದ ನೆಲಮಂಗಲ ಗ್ರಾಮಾಂತರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದರು. ಅಲ್ಲದೆ, ಬೆರಳಚ್ಚು ತಜ್ಞರ ತಂಡ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ
ಅಕ್ರಮಗಳನ್ನ ಮುಚ್ಚಿ ಹಾಕಲು ಕಳ್ಳತನ ಮಾಡಿಸಿರುವ ಶಂಕೆ ಇದ್ದು, ಸೂಕ್ತ ತನಿಖೆ ಮಾಡಿ ಕಳ್ಳರನ್ನು ಬಂಧಿಸುವಂತೆ ಸಾರ್ವಜನಿಕರು ಪೊಲೀಸರನ್ನು ಒತ್ತಾಯಿಸಿದ್ದಾರೆ.
ಈ ಕುರಿತಂತೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--
Latest News
others
agriculture
others
others
politics