ವಿಶ್ವಕಪ್ ಗೆಲ್ಲದಿದ್ದರೂ ಹೃದಯ ಗೆದ್ದಿದ್ದೀರಿ; ಭಾರತ ತಂಡಕ್ಕೆ ಪ್ರಧಾನಿ ಮೋದಿ ಸಾಂತ್ವನ
ವಿಶ್ವಕಪ್ ಗೆಲ್ಲದಿದ್ದರೂ ಹೃದಯ ಗೆದ್ದಿದ್ದೀರಿ; ಭಾರತ ತಂಡಕ್ಕೆ ಪ್ರಧಾನಿ ಮೋದಿ ಸಾಂತ್ವನ

ಅಹ್ಮದಾಬಾದ್​, (ನ.20): ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಫೈನಲ್ ನಲ್ಲಿ ಸೋತ ಭಾರತ ತಂಡದ ಪರವಾಗಿ ಮಾತುಗಳನ್ನಾಡಿರುವ ಪ್ರಧಾನಿ ನರೇಂದ್ರ ಮೋದಿ, ವಿಶ್ವಕಪ್ ಗೆಲ್ಲದಿದ್ದರೂ ಹೃದಯ ಗೆದ್ದಿದ್ದೀರಿ, ಯಾವಾಗಲೂ ನಿಮ್ಮೊಂದಿಗಿದ್ದೇವೆ ಎಂದು ಸಂತೈಸಿದ್ದಾರೆ.

ಈ ಕುರಿತು ಎಕ್ಸ್ ಮಾಡಿರುವ ಪ್ರಧಾನಿ ಮೋದಿ, ಆತ್ಮೀಯ ಟೀಮ್ ಇಂಡಿಯಾ, ವಿಶ್ವಕಪ್ ಮೂಲಕ ನಿಮ್ಮ ಪ್ರತಿಭೆ ಮತ್ತು ಸಂಕಲ್ಪ ದೇಶದ ಗಮನ ಸೆಳೆಯಿತು. ನೀವು ಉತ್ತಮ ಉತ್ಸಾಹದಿಂದ ಆಡಿದ್ದೀರಿ ಮತ್ತು ರಾಷ್ಟ್ರಕ್ಕೆ ಅಪಾರ ಹೆಮ್ಮೆ ತಂದಿದ್ದೀರಿ. ಕಪ್​ ಗೆಲ್ಲದಿದ್ದರೂ ನೀವು ಶತಕೋಟಿ ಭಾರತೀಯರ ಹೃದಯ ಗೆದ್ದಿದ್ದೀರಿ. ನಾವು ಎಂದೂ ನಿಮ್ಮೊಂದಿಗೆ ಇರುತ್ತೇವೆ ಎಂದು ಮೋದಿ​ ಮೂಲಕ ಸಂತೈಸಿದ್ದಾರೆ.

ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್​ಗಳ ಸೋಲು ಕಂಡಿತು. ಆ ಮೂಲಕ ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್​ ಫೈನಲ್ ನಲ್ಲಿ ಮತ್ತೆ ಭಾರತ ತಂಡ ಸೋತಿದೆ. ಈ ಸೋಲಿನ ಬೆನ್ನಲ್ಲೇ ತಂಡಕ್ಕೆ ಸಮಾಧಾನದ ಮಾತುಗಳನ್ನಾಡಿರುವ ಪ್ರಧಾನಿ ಮೋದಿ ಅವರು, ವಿಶ್ವಕಪ್ ಗೆಲ್ಲದಿದ್ದರೂ ಹೃದಯ ಗೆದ್ದಿದ್ದೀರಿ, ಯಾವಾಗಲೂ ನಿಮ್ಮೊಂದಿಗಿದ್ದೇವೆ ಎಂದು ಹೇಳಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....