ನವದೆಹಲಿ, (ನ.20); ಅಹ್ಮದಾಬಾದ್ ನಲ್ಲಿನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ವಿಶ್ವಕಪ್ ಫೈನಲ್ಸ್ ಪಂದ್ಯಕ್ಕೆ ತಮ್ಮನ್ನು ಆಹ್ವಾನಿಸಿರಲಿಲ್ಲ ಎಂದು ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಭಾನುವಾರ ಬೇಸರ ವ್ಯಕ್ತಪಡಿಸಿದ್ದಾರೆ.
ಮೊದಲ ಬಾರಿಗೆ ವಿಶ್ವಕಪ್ ನ್ನು ಗೆದ್ದ ಭಾರತ ತಂಡದ ನಾಯಕನಾಗಿದ್ದ ಕಪಿಲ್ ದೇವ್ ಗೆ ಈ ಪಂದ್ಯಕ್ಕೆ ಆಹ್ವಾನ ನೀಡಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಪಂದ್ಯ ಆರಂಭಕ್ಕೂ ಮುನ್ನ ಎಬಿಪಿ ನ್ಯೂಸ್ ಜೊತೆ ಮಾತನಾಡಿದ್ದ ಕಪಿಲ್ ದೇವ್, ತಮ್ಮನ್ನು ಫೈನಲ್ಸ್ ಪಂದ್ಯಕ್ಕಾಗಿ ಅಹ್ಮದಾಬಾದ್ ಗೆ ಆಹ್ವಾನಿಸಿಲ್ಲ ಎಂದು ಹೇಳಿದ್ದಾರೆ.
ನೀವು ನನ್ನನ್ನು ಆಹ್ವಾನಿಸಿದ್ದೀರಿ ನಾನು ಬಂದಿದ್ದೀನಿ, ಅವರು ನನ್ನನ್ನು ಆಹ್ವಾನಿಸಿಲ್ಲ ನಾನು ಹೋಗಿಲ್ಲ ಎಂದು ಕಪಿಲ್ ದೇವ್ ಅಳಲು ತೋಡಿಕೊಂಡಿದ್ದಾರೆ.
ಮಾಜಿ ನಾಯಕ ಸೌರವ್ ಗಂಗೂಲಿ ಅವರನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಮಾಜಿ ಅಧ್ಯಕ್ಷರೆಂಬ ನೆಲೆಯಲ್ಲಿ ಆಹ್ವಾನಿಸಲಾಗಿತ್ತು. ಮಾಜಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಆಹ್ವಾನಿಸುವುದು ಬಿಸಿಸಿಐ ಸಂಪ್ರದಾಯ.
ಹಾಜರಿದ್ದ ಇತರ ಗಣ್ಯರಲ್ಲಿ ಶಾರೂಕ್ ಖಾನ್, ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್, ಬ್ಯಾಡ್ಮಿಂಟನ್ ದಿಗ್ಗಜ ಪಡುಕೋಣೆ ಅವರೂ ಸ್ಟ್ಯಾಂಡ್‌ನಲ್ಲಿ ಕಾಣಿಸಿಕೊಂಡಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
agriculture
others
others
politics
politics