ನಂದಿ ಮೋರಿ ಬಳಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು..!
ನಂದಿ ಮೋರಿ ಬಳಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ, (ನ.20): ನಗರದ ಹೊರವಲಯದಲ್ಲಿರುವ ನಂದಿ ಮೋರಿ ಸಮೀಪ ಸುಮಾರು 45 ವರ್ಷ ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ ಮೃತಪಟ್ಟಿದ್ದು, ಯಶವಂತಪುರ ರೈಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತನ ಹೆಸರು, ವಿಳಾಸ ಪತ್ತೆಯಾಗಿರುವುದಿಲ್ಲ‌. ಶರ್ಟ್ ಕಾಲರ್‌ನಲ್ಲಿ ZAILA Menswear Tumkur ಎಂದಿದೆ..

ಚಹರೆ; ಮೃತನು 5'5 ಅಡಿ ಎತ್ತರ, ಎಣ್ಣೆಗೆಂಪು ಮೈ ಬಣ್ಣ, ಸಾಧಾರಣ ಮೈಕಟ್ಟು, ಕೋಲು ಮುಖ, ಉದ್ದನೆಯ ಮೂಗು, ಅಗಲವಾದ ಹಣೆ, ತಲೆಯಲ್ಲಿ ಸುಮಾರು 2 ಇಂಚು ಉದ್ದದ ಕಪ್ಪು, ಬಿಳಿ ಮಿಶ್ರಿತ ಕೂದಲು ಹೊಂದಿರುತ್ತಾರೆ. 

ಬಟ್ಟೆಗಳು: ಗಿಣಿ ಹಸಿರು ಮಾಸಲು ಬಣ್ಣದ  ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸುತ್ತಾನೆ. 

ವಾರಸುದಾರರು ಯಾರಾದರು ಇದ್ದಲ್ಲಿ ರೈಲ್ವೆ ಪೊಲೀಸ್ ಇನ್ಸ್‌ಪೆಕ್ಟರ್ 9480802118 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....