ಶಾಲಾ ಮಕ್ಕಳ ಅಸ್ವಸ್ಥ ಪ್ರಕರಣ: ಆರೋಗ್ಯ ವಿಚಾರಿಸಿದ ಶಾಸಕ
ಶಾಲಾ ಮಕ್ಕಳ ಅಸ್ವಸ್ಥ ಪ್ರಕರಣ: ಆರೋಗ್ಯ ವಿಚಾರಿಸಿದ ಶಾಸಕ

ಕುಣಿಗಲ್, (ಫೆ.11); ಶಾಲೆಯಲ್ಲಿ ವಿಷಾಹಾರ ಸೇವಿಸಿ ವಾಂತಿ ಹಾಗೂ ಹೊಟ್ಟೆ ನೋವಿನಿಂದ ಅಸ್ವಸ್ಥರಾಗಿ ಕುಣಿಗಲ್ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಲಾ ಮಕ್ಕಳನ್ನು ಶನಿವಾರ ಶಾಸಕ ಡಾ.ಎಚ್.ಡಿ.ರಂಗನಾಥ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ತಾಲೂಕಿನ ಸೀನಪ್ಪನಹಳ್ಳಿ ಗ್ರಾಮದ ಅನುದಾನಿತ ಪ್ರೌಢಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ಮೊಸರನ್ನ ತಿಂದು ಇಬ್ಬರು ಶಿಕ್ಷಕರು, ಓರ್ವ ಅಡುಗೆ ಸಿಬ್ಬಂದಿ ಸೇರಿದಂತೆ ಸುಮಾರು 56ಕ್ಕೂ ಹೆಚ್ಚು ಮಕ್ಕಳು ವಾಂತಿ ಹಾಗೂ ಹೊಟ್ಟೆ ನೋವಿಂದ ಬಳಲುತ್ತಿದ್ದರು. ಎಲ್ಲರನ್ನೂ ಹುಣಿಗಲ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾ ಇತ್ತು. 

ಇನ್ನೂ 29ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಸಕ ಡಾ.ರಂಗನಾಥ್ ಭೇಟಿ ನೀಡಿ ಮಕ್ಕಳ ಯೋಗ ಕ್ಷೇಮ ವಿಚಾರಿಸಿ ಧೈರ್ಯ ತುಂಬಿದರು. 

ವಿದ್ಯಾರ್ಥಿಗಳು ಅಸ್ವಸ್ಥರಾಗಲು ಕಾರಣ ಏನು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಮರಿಯಪ್ಪ ಅವರಿಂದ ಮಾಹಿತಿ ಪಡೆದರು. ಸಂಬಂಧಪಟ್ಟ ಮಾತ್ರೆ ಹಾಗೂ ಔಷಧಿ ನಿಮ್ಮಲ್ಲಿ ಲಭ್ಯವಿಲ್ಲದಿದ್ದರೇ ಬೇರೆ ಕಡೆಯಿಂದ ತರಿಸಿಕೊಡಬೇಕು ಯಾರಿಂದಲೂ ನಯಾಪೈಸೆ ಹಣ ಪಡೆಯ ಕೂಡದು ಎಂದು ಆಸ್ಪತ್ರೆ ಅಡಳಿತ ವೈದ್ಯಾಧಿಕಾರಿ ಡಾ.ಗಣೇಶ್‌ಬಾಬು ಅವರಿಗೆ ಸೂಚನೆ ನೀಡಿದರು. ಅಲ್ಲದೇ, ಘಟನೆ ಕುರಿತು ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಂಸದ ಡಿ.ಕೆ.ಸುರೇಶ್ ಅವರ ವಿರುದ್ದ ಅವಹೇಳನಾಕಾರಿಯಾಗಿ ಮಾತನಾಡಿರುವ ಮಾಜಿ ಸಚಿವ ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಡಾ.ರಂಗನಾಥ್, ಈಶ್ವರಪ್ಪರ ಹೇಳಿಕೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಬಾಯಿಗೆ ಬಂದಂತೆ ಮಾತನಾಡುವುದು ಹಿರಿಯ ರಾಜಕಾರಣಿ ಈಶ್ವರಪ್ಪ ಅವರ ಘನತೆಯನ್ನು ತೋರಿಸುತ್ತದೆ. ಸಂಸದ ಡಿ.ಕೆ.ಸುರೇಶ್ ಅವರು ರಾಜ್ಯದ ಪಾಲಿನ ತೆರಿಗೆ ಹಣ ಕೇಳಿದ್ದು ತಪ್ಪಾ ಎಂದು ಪ್ರಶ್ನಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ, ಪುರಸಭೆ ಸದಸ್ಯರಾದ ಅರುಣ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಲೋಹಿತ್, ಮಹಾತ್ಮ ಗಾಂಧಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಎಸ್‌ಟಿಡಿ ಮೋಹನ್ ಮತ್ತಿತರರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....