ಕಮ್ ಬ್ಯಾಕ್ ಮಾಡಿದ ರಾಹುಲ್, ಜಡೇಜಾ.. ಕೊಹ್ಲಿ, ಶಮಿ..?
ಕಮ್ ಬ್ಯಾಕ್ ಮಾಡಿದ ರಾಹುಲ್, ಜಡೇಜಾ.. ಕೊಹ್ಲಿ, ಶಮಿ..?

ನವದೆಹಲಿ, (ಫೆ.11); ಭಾರತ ತಂಡದ ಸ್ಟಾರ್ ಆಟಗಾರರಾದ  ಕೆಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದ  ವಿಶಾಖಪಟ್ಟಣಂನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್‌ನಿಂದ ಹೊರಗುಳಿದಿದ್ದು ಗೊತ್ತೇ ಇದೆ. ಈಗ ಇಂಗ್ಲೆಂಡ್ ವಿರುದ್ಧದ ಅಂತಿಮ ಮೂರು ಟೆಸ್ಟ್‌ಗಳಿಗೆ ಭಾರತ ತಂಡದಲ್ಲಿ ಇಬ್ಬರೂ ಸ್ಥಾನ ಪಡೆದಿದ್ದಾರೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

ಇನ್ನು ಕಳೆದ ವರ್ಷ ವಿಶ್ವಕಪ್ ನಲ್ಲಿ ಪಾದದ ಗಾಯಕ್ಕೆ ತುತ್ತಾದ ವೇಗಿ ಮೊಹಮ್ಮದ್ ಶಮಿ ಮತ್ತು ಕಿಂಗ್ ವಿರಾಟ್ ಕೊಹ್ಲಿ ಅವರು ಕುಟುಂಬದ ತುರ್ತುಸ್ಥಿತಿಯಿಂದಾಗಿ ಸರಣಿಯಲ್ಲಿ ಭಾಗವಹಿಸುವುದಿಲ್ಲ ಎಂಬುದು ಖಚಿತವಾಗಿದೆ. 

ಪ್ರಸ್ತುತ 1-1 ರಲ್ಲಿ ಸಮಬಲಗೊಂಡಿರುವ  ಸರಣಿಯ ಮೂರನೇ ಟೆಸ್ಟ್ ಪಂದ್ಯ  ಫೆಬ್ರವರಿ 15 ರಂದು ರಾಜ್‌ಕೋಟ್‌ನಲ್ಲಿ ಪ್ರಾರಂಭವಾಗುತ್ತದೆ.

ಅಂತಿಮ 3 ಪಂದ್ಯಕ್ಕೆ ಭಾರತ ತಂಡ ಹೀಗಿದೆ; ರೋಹಿತ್ ಶರ್ಮಾ (ಸಿ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಜತ್ ಪಾಟಿದಾರ್, ರವೀಂದ್ರ ಜಡೇಜಾ, ಕೆಎಸ್ ಭರತ್ (ವಿಕೆ), ಧ್ರುವ್ ಜುರೆಲ್ (ವಿಕೆ), ಅಕ್ಸರ್ ಪಟೇಲ್, ಆರ್ ಅಶ್ವಿನ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ (ವಿಸಿ), ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....