ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ: ರೈತರ ಬಗ್ಗೆ ಮಾತನಾಡಲು ಅಮಿತ್ ಶಾಗೆ ನೈತಿಕತೆ ಇಲ್ಲ - ಸಿಎಂ ಸಿದ್ದರಾಮಯ್ಯ
ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ: ರೈತರ ಬಗ್ಗೆ ಮಾತನಾಡಲು ಅಮಿತ್ ಶಾಗೆ ನೈತಿಕತೆ ಇಲ್ಲ - ಸಿಎಂ ಸಿದ್ದರಾಮಯ್ಯ

ಬೆಂಗಳೂರು, (ಫೆ.11): ಕೇಂದ್ರ ¸ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆ ಹಾಗೂ ಮುಖಂಡರುಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ  ಮಾತನಾಡಿದರು. 

ನೈತಿಕ ಹಕ್ಕಿಲ್ಲ: ಇಂದಿನವರೆಗೆ ಬರಗಾಲದ ಬಗ್ಗೆ ಐದು ತಿಂಗಳಾದರೂ ಒಂದು ಸಭೆಯನ್ನೂ ಅಮಿತ್ ಶಾ ಕರೆದಿಲ್ಲ. ಬರಪರಿಹಾರ ಕೊಡಲು ಇರುವ ಸಮಿತಿಗೆ ಅವರೇ ಅಧ್ಯಕ್ಷರು. ದೇಶದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ. ರೈತರು ಬರಗಾಲದಲ್ಲಿ ಕಷ್ಟಪಡುತ್ತಿದ್ದಾರೆ. ಬರಗಾಲ ಬಂದಾಗ ಎಂ.ಎನ್.ನರೇಗಾ ಯೋಜನೆಯಡಿ  150 ಮಾನವದಿನಗಳನ್ನು ಹೆಚ್ಚಿಸುವುದು ಕಡ್ಡಾಯವಾದರೂ ಇಂದಿನವರೆಗೆ ಹೆಚ್ಚಿಸಿಲ್ಲ. ಆದರೆ ಕೇಂದ್ರ ಸರ್ಕಾರದವರು ಅನುಮತಿ ನೀಡದೇ,  2-3 ಪತ್ರ ಬರೆದಿದ್ದರೂ ಉತ್ತರ ನೀಡಿಲ್ಲ ಎಂದರು. 

ಅನ್ಯಾಯವನ್ನೆಲ್ಲಾ ಸರಿ ಎಂದು ಹೇಳಬಾರದು: ನಿರ್ಮಲಾ ಸೀತಾರಾಮನ್  ಅವರು ತಕ್ಕ ಉತ್ತರ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಸಂಸತ್ತಿನಲ್ಲಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈಗ ಅವರು ಅವರ ಜೊತೆ ಸೇರಿದ್ದಾರೆ. ಇದೇ ದೇವೆಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು  ಎಂದಿದ್ದ ದೇವೇಗೌಡರು ಈಗೇನು ಹೆಳುತ್ತಿದ್ದಾರೆ.  ಅವರು  ಯಜಮಾನರು,  ಮಾಜಿ ಪ್ರಧಾನಿಗಳಾಗಿದ್ದವರು ಹೀಗೆ ಹೇಳಬಾರದು. ಬಿಜೆಪಿಯೊಂದಿಗೆ  ಮೈತ್ರಿ ಮಾಡಿಕೊಂಡಿದ್ದಾರೆ  ಎಂಬ ಕಾರಣಕ್ಕೆ ಅವರು ಮಾಡಿದ ಅನ್ಯಾಯವನ್ನೆಲ್ಲಾ ಸರಿ ಎಂದು ಹೇಳಬಾರದು ಎಂದರು. 

ಚಾಮರಾಜನಗರ, ಮೈಸೂರು ಕ್ಷೇತ್ರ ಎರಡನ್ನೂ ಗೆಲ್ಲಲಿದೆ: ಚುನಾವಣೆ ರಣಕಹಳೆ ಮೈಸೂರಿನಿಂದಲೇ ಅಮಿತ್ ಶಾ ಮೊಳಗಿಸುತ್ತಿರುವ ಬಗ್ಗೆ  ಮಾತನಾಡಿ ಚಾಮರಾಜನಗರ, ಮೈಸೂರು ಕ್ಷೇತ್ರ ಎರಡನ್ನೂ ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

politics

HL

economy

HL

economy

HL

economy

HL

crime

HL

others

HL

others

HL

others

HL

others

HL

others

HL

politics

HL

others

HL

sports

HL

others

HL

others

HL

education

HL

politics

HL

economy

HL

politics

HL

sports

HL

others

HL

economy

HL

others

HL

others

HL

crime

HL

education

HL

others

HL

politics