ACCIDENT; ಸರಣಿ ಅಪಘಾತ..ಯುವತಿ ಸಾವು..!
ACCIDENT; ಸರಣಿ ಅಪಘಾತ..ಯುವತಿ ಸಾವು..!

ಹೊಸಕೋಟೆ (ಫೆ.11): ಪಟ್ಟಣದ ಕೋರ್ಟ್‌ ಸರ್ಕಲ್‌ನಲ್ಲಿ ರಸ್ತೆ ದಾಟುವ ಪಾದಚಾರಿಗಳಿಗೆ ಕ್ಯಾಂಟರ್ ಡಿಕ್ಕಿ ಹೊಡೆದು ಓರ್ವ ಯುವತಿ ಸಾವನ್ನಪ್ಪಿದ್ದಾಳೆ. ಯುವತಿಯ ಬಲಿ ಪಡೆದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಮತ್ತೊಬ್ಬ ಬೈಕ್ ಸವಾರ ಹಾಗೂ ತಿರುಪತಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದಿದೆ.

ಈ ಸರಣಿ ಅಪಘಾತದಲ್ಲಿ ಬನ್ನೇರುಘಟ್ಟ ಮೂಲದ ಯುವತಿ ಸುಧಾ (20 ವರ್ಷ) ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮುಳಬಾಗಿಲಿನ  ಬೈಕ್ ಸವಾರ ನಜೀರ್ ಖಾನ್‌ಗೆ (65 ವರ್ಷ) ಗಂಭೀರ ಗಾಯವಾಗಿದೆ. ಅಲ್ಲದೆ ಕ್ಯಾಂಟರ್ ಚಾಲಕ ಕೊಲ್ಕತ್ತಾ ಮೂಲದ ಷರೀಪ್ ಉಲ್ಲಾನಿಗೂ (30 ವರ್ಷ) ಗಂಭೀರ ಗಾಯವಾಗಿದೆ. 

ಇನ್ನು ಕೆಎಸ್ ಆರ್ ಟಿಸಿ ಬಸ್ ಗೆ ಹಿಂಬದಿಯಿಂದ ಡಿಕ್ಕಿ ಪ್ರಯಾಣಿಕರು ಪಾರಾಗಿದ್ದಾರೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ಯುವತಿಯನ್ನು ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ. ಗಾಯಳುಗಳನ್ನು ಹೊಸಕೋಟೆ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

-->