ವಾಹನ ಮಾಲೀಕರಿಗೆ ನೆಮ್ಮದಿ; HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಣೆ..!
ವಾಹನ ಮಾಲೀಕರಿಗೆ ನೆಮ್ಮದಿ; HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಣೆ..!

ಬೆಂಗಳೂರು, (ಫೆ.14): ವಾಹನಗಳಿಗೆ ಹೆಚ್ ಎಸ್ ಆರ್ ಪಿ (HSRP) ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಈ ಬಗ್ಗೆ ವಿಧಾನ ಪರಿಷತ್‌ನಲ್ಲಿ  ಪ್ರಶೋತ್ತರ ಕಲಾಪದ ವೇಳೆ ಶಾಸಕ ಮಾದೇಗೌಡ  ಅವರು ಮಾತನಾಡಿ "ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚಿನ ವಾಹನಗಳಿವೆ. ಹಳ್ಳಿ ಜನರು ವಾಹನಗಳಿಗೆ ಇನ್ನೂ ಹೆಚ್‌ಎಸ್‌ಆರ್‌ಪಿ ನೇಮ್ ಪ್ಲೇಟ್ ಅಳವಡಿಸಬೇಕು. ಆನ್‌ಲೈನ್‌ನಲ್ಲಿ ನೊಂದಣಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಫೇಕ್ ವೆಬ್ ಸೈಟ್ ಹಾವಳಿ ಹೆಚ್ಚಾಗಿದೆ ಇದರ ಬಗ್ಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿಯನ್ನು ಸರ್ಕಾರ ನೀಡಿರುವ ಗಡುವು ವಿಸ್ತರಿಸಬೇಕು" ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಸಚಿವ ರಾಮಲಿಂಗಾರೆಡ್ಡಿ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗುತ್ತದೆ. ಇನ್ನು ಫೇಕ್ ವೆಬ್ ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ. ಈ ಯೋಜನೆ ಪಾರದರ್ಶಕವಾಗಿದೆ ಎಂದು ಸದನಕ್ಕೆ ತಿಳಿಸಿದರು.

ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅವಳಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಫೆಬ್ರವರಿ 17ರೊಳಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು. ಇದೀಗ ಈ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others

HL

crime