ರಾತ್ರಿ ಕಾರ್ ಹಿಂಬಾಲಿಸಿ ಕಿರುಕುಳ: ಇಬ್ಬರ ಬಂಧನ.. ಮಧ್ಯದ ಬೆರಳು ತೋರಿಸಿದ್ದಕ್ಕೆ ಫಾಲೋ.?: ವಿಡಿಯೋ ನೋಡಿ
ರಾತ್ರಿ ಕಾರ್ ಹಿಂಬಾಲಿಸಿ ಕಿರುಕುಳ: ಇಬ್ಬರ ಬಂಧನ.. ಮಧ್ಯದ ಬೆರಳು ತೋರಿಸಿದ್ದಕ್ಕೆ ಫಾಲೋ.?: ವಿಡಿಯೋ ನೋಡಿ

ಬೆಂಗಳೂರು, (ಏ.02); ಮಹಿಳೆಯಿದ್ದ ಕಾರ್ ಅನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದಡಿ ‌ ವಿದ್ಯಾರ್ಥಿ ಸೇರಿ ಇಬ್ಬರನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶೇಷಾದ್ರಿಪುರ ನಿವಾಸಿಗಳಾದ ಜಗನ್ನಾಥ್ (28 ವರ್ಷ) ಮತ್ತು ತೇಜಸ್ (21 ವರ್ಷ) ಬಂಧಿತರು. ಮತ್ತೊಬ್ಬ ಆರೋಪಿ ಕಣ್ಣನ್ ಎಂಬಾತ ತಲೆ ಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ. 

ಭಾನುವಾರ ರಾತ್ರಿ ಆರೋಪಿಗಳು ಕಾರೊಂ ದನ್ನು ಹಿಂಬಾಲಿಸಿ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂಬ ವಿಡಿಯೋವನ್ನು ಸನುಕ್ ಘೋಷ್ ಎಂಬುವವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿ ಕೊಂಡು ನಗರ ಪೊಲೀಸರಿಗೆ ಟ್ಯಾಗ್ ಮಾಡಿದ್ದರು.

ಇದರ ಬೆನ್ನಲ್ಲೇ ಮಡಿ ವಾಳ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಅರೋಪಿಗಳನ್ನು ಬಂಧಿಸಿದ್ದಾರೆ.

ಸಹಾಯವಾಣಿಗೆ ದೂರು: ಆರೋಪಿಗಳ ವರ್ತನೆಯಿಂದ ಗಾಬರಿಗೊಂಡ ಮಹಿಳೆ, ತನ್ನ ಮೊಬೈಲ್‌ನಲ್ಲಿ ಆರೋಪಿಗಳ ಪುಂಡಾಟವನ್ನು ಸೆರೆಹಿಡಿದಿದ್ದಾರೆ. ಬಳಿಕ ಆ ವಿಡಿಯೊವನ್ನು ಪರಿಚಿತ ಸನುಕ್ ಘೋಷ್‌ಗೆ ಕಳುಹಿಸಿದ್ದಾರೆ. 

ಅಂತೆಯೆ 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ಪೊಲೀಸರು ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆ ಆಧರಿಸಿ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಬಂಧಿತ ಆರೋಪಿ ಜಗನ್ನಾಥ್ ಕಾಲ್ ಸೆಂಟರ್ ಉದ್ಯೋಗಿಯಾಗಿದ್ದರೆ, ಆರೋಪಿ ತೇಜಸ್ ಶೇಷಾದ್ರಿಪುರದ ಖಾಸಗಿ ಕಾಲೇಜಿನಲ್ಲಿ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದಾನೆ. 

ಕಾರು ಚಾಲಕ ಇಂಡಿಕೇಟರ್ ಹಾಕದೆ ಎಡ ತಿರುವು ಪಡೆದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಮಾಡಿದರು. ಇದನ್ನು ಪ್ರಶ್ನಿಸಿದಕ್ಕೆ ಮಧ್ಯದ ಬೆರಳನ್ನು ತೋರಿಸಿ ನಿಂದಿಸಿದರು. ಹೀಗಾಗಿ ನಾವು ಕಾರನ್ನು ಹಿಂಬಾಲಿಸಿದ್ದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಧ್ಯದ ಬೆರಳು ತೋರಿಸಿದ್ದಕ್ಕೆ ಫಾಲೋ..?; ಆರೋಪಿಗಳು ಮೂರು ದ್ವಿಚಕ್ರ ವಾಹನಗಳಲ್ಲಿ ಹೊಸೂರು ಬಳಿ ಇರುವ ಫಾಲ್ಸ್‌ ಗೆ ಹೋಗಿ ಭಾನುವಾರ ರಾತ್ರಿ ನಗರಕ್ಕೆ ವಾಪಾಸಾಗುತ್ತಿದ್ದರು. 

ರಾತ್ರಿ 8 ಗಂಟೆ ಸುಮಾರಿಗೆ ಹೊಸೂರು ರಸ್ತೆಯ ಸೇಂಟ್ ಜಾನ್ಸ್ ಆಸ್ಪತ್ರೆ ಕಡೆಯಿಂದ ಮಹಿಳೆ ಮತ್ತು ಆಕೆಯ ಪತಿ ಕಾರಿನಲ್ಲಿ ಮಡಿವಾಳ ಕಡೆಗೆ ಬರುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಕಾರು ಚಾಲಕ ಯಾವುದೇ ಸೂಚನೆ ನೀಡದೆ ಎಡ ತಿರುವು ಪಡೆದ ಪರಿಣಾಮ ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಇದರಿಂದ ಕೋಪಗೊಂಡ ಆರೋಪಿಗಳು ಇಂಡಿಕೇಟರ್ ಹಾಕಿಕೊಂಡು ಎಡ ತಿರುವು ಪಡೆಯಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಕಾರು ಚಾಲಕ ಮಧ್ಯದ ಬೆರಳನ್ನು ಅಸಹ್ಯವಾಗಿ ತೋರಿಸಿ ಮುಂದಕ್ಕೆ ತೆರಳಿದ್ದಾನೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ಆರೋಪಿಗಳು, ಆ ಕಾರನ್ನು ಹಿಂಬಾಲಿಸಿದ್ದಾರೆ. ಮಡಿವಾಳ ಕೇಳಸೇತುವೆ ಬಳಿ ಕಾರಿನ ಅಕ್ಕಪಕ್ಕ ಬಂದು ದ್ವಿಚಕ್ರ ವಾಹನ ನಿಲ್ಲಿಸಿ, ಕಾರಿನ ಬಾಗಿಲು ತೆರೆಯಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

politics

HL

economy

HL

economy

HL

economy

HL

crime

HL

others

HL

others

HL

others

HL

others

HL

others

HL

politics

HL

others

HL

sports

HL

others

HL

others

HL

education

HL

politics

HL

economy

HL

politics

HL

sports

HL

others

HL

economy

HL

others

HL

others

HL

crime

HL

education

HL

others

HL

politics