ಬೆಂಗಳೂರು, (ಏ.02): ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆ ಬೆನ್ನಲ್ಲೆ ಪಕ್ಷದಲ್ಲಿ ಉಂಟಾಗಿರುಚ ಆಂತರಿಕ ಭಿನ್ನಮತ, ಬಂಡಾಯದಂತಹ ಚಟುವಟಿಕೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಸಮಾಧಾನದ ಬೆಂಕಿ ಶಮನ ಮಾಡುವ ಯತ್ನ ನಡೆಸಲಿದ್ದಾರೆ.
ಸೋಮವಾರ ರಾತ್ರಿ ಬೆಂಗಳೂರಿಗೆ ಬಂದಿಳಿದ ಅಮಿತ್ ಶಾ, ಪಕ್ಷದ ವಿವಿಧ ಹಂತದ ನಾಯಕರ ಜತೆ, ಮಿತ್ರ ಪಕ್ಷ ಜೆಡಿಎಸ್ ನಾಯಕರ ಜತೆ ಹಲವು ಸಭೆಗಳನ್ನು ನಡೆಸಲಿದ್ದಾರೆ.
ಬಂಡಾಯ ಎದುರಿಸುತ್ತಿರುವ ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಬೀದರ್, ಬೆಳಗಾವಿ ಲೋಕಸಭಾ ಕ್ಷೇತ್ರಗಳ ಜಿಲ್ಲಾ ಪ್ರಮುಖ ನಾಯಕರ ಸಮಿತಿ (ಕೋರ್ ಕಮಿಟಿ) ಸದಸ್ಯರ ಜೊತೆಗೂ ಶಾ ಸಭೆ ನಡೆಸಲಿದ್ದಾರೆ.
ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿರುವ ಅಸಮಾಧಾನವನ್ನು ಬಗೆಹರಿಸುವುದರ ಜತೆಗೆ, ಮಿತ್ರ ಪಕ್ಷ ಜೆಡಿಎಸ್ ಜತೆಗೆ ಹೆಗಲಿಗೆ ಹೆಗಲುಕೊಟ್ಟು ಶ್ರಮಿಸಲು ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆದ ತಪ್ಪುಗಳು ಮರುಕಳಿಸದಂತೆ ಎಚ್ಚರವಹಿಸಿರುವ ಅಮಿತ್ ಶಾ ಅವರು, ಈ ವಿಚಾರವಾಗಿ ಪಕ್ಷದ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಲಿದ್ದಾರೆ. ಪಕ್ಷದ ಎಲ್ಲ ನಾಯಕರು ಮತ್ತು ಕಾರ್ಯಕರ್ತರು ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಬೇಕು.
ಅಭ್ಯರ್ಥಿಗಿಂತ ಪಕ್ಷದ ಗೆಲುವು ಮತ್ತು ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬುದು ಮುಖ್ಯ. ಅದಕ್ಕಾಗಿ ಬೆವರು ಹರಿಸಬೇಕು. ಇದಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡರೆ, ಪರೋಕ್ಷವಾಗಿ ವಿರೋಧಿಗಳ ಜೊತೆ ಕೈ ಜೋಡಿಸಿದರೆ, ಅಂತಹವರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂಬ ಎಚ್ಚರಿಕೆಯನ್ನೂ ನೀಡಲಿದ್ದಾರೆ' ಎಂದು ಮೂಲಗಳು ವಿವರಿಸಿವೆ.
ಪ್ರತ್ಯೇಕ ರಾಷ್ಟ್ರಕ್ಕೆ ಒತ್ತಾಯಿಸುವ ಅನಿವಾರ್ಯತೆ ಸೃಷ್ಟಿಸುತ್ತಿರುವ ಕುರಿತು ಪ್ರಸ್ತಾಪ ಮಾಡಿ ವಿವಾದಕ್ಕೆ ಒಳಗಾಗಿದ್ದ ಸಂಸದ ಡಿಕೆ ಸುರೇಶ್ ಪ್ರತಿನಿಧಿಸುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದಲೇ ಕರ್ನಾಟಕದ ಚುನಾವಣಾ ಪ್ರಚಾರಕ್ಕೂ ಚಾಲನೆ ನೀಡಲಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
others
crime
crime
crime
crime
politics
crime
others
crime
others
others
crime
others
others
others
others
crime
education
crime
crime
others
crime
education
others
others
crime
economy
crime
sports
others