DC ಕಚೇರಿಯಲ್ಲೇ PDO ಆತ್ಮಹತ್ಯೆಗೆ ಯತ್ನ..!
DC ಕಚೇರಿಯಲ್ಲೇ PDO ಆತ್ಮಹತ್ಯೆಗೆ ಯತ್ನ..!

ಮಂಗಳೂರು, (ಏ.02); ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ಧತಿ ತಂಡದ ಸದಸ್ಯ ಶ್ರೀಧರ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ಗುರುತಿಸಲಾಗಿದೆ.

ವಿಚಾರ ತಿಳಿದ ತಕ್ಷಣ ಅವರನ್ನು ನಗರದ ಜಿಲ್ಲಾ ಸರ್ಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.

2019 ರಿಂದ ಬೆಳ್ತಂಗಡಿಯ ಕಡಿರು ಉದ್ಯಾವರ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅವರ ಜಾಗಕ್ಕೆ ಮತ್ತೊಬ್ಬರು ವಾರ್ಗಾವಣೆಯಾಗಿದ್ದರು. ಬಳಿಕ ಯಾವುದೇ ಹುದ್ದೆ ನೀಡದ ಹಿನ್ನೆಲೆ ಫೆಬ್ರವರಿಯಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು ಎನ್ನಲಾಗಿದೆ.

ಶ್ರೀಧ‌ರ್ ಅವರಿಗೆ ಇದೀಗ ವೈದ್ಯರು ಚಿಕಿತ್ಸೆ ನೀಡಿದ್ದು, ಹೆಚ್ಚಿನ ಆರೈಕೆಗೆ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....