ದೊಡ್ಡಬಳ್ಳಾಪುರ, (ಏ.02); ಲೋಕಸಭಾ ಚುನಾವಣೆ ಪ್ರಯುಕ್ತ ನೇಮಕಾತಿಯಾಗಿರುವ ಎಲ್ಲಾ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಚುನಾವಣಾ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯಲ್ಲಿ ಚುನಾವಣಾ ಕಾರ್ಯ ಯಶಸ್ವಿಯಾಗಲು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಎಮ್.ಸಿ.ಸಿ ಅಧ್ಯಕ್ಷೆ ಡಾ.ಕೆ.ಎನ್.ಅನುರಾಧ ಕಟ್ಟುನಿಟ್ಟಾದ ಸೂಚನೆ ನೀಡಿದರು.
ಇಂದು ನಗರಸಭೆ ಸಭಾಂಗಣದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಎಸ್ .ಎಸ್. ಟಿ, ಎಫ್ ಎಸ್ ಟಿ, ವಿ ಎಸ್ ಟಿ ಹಾಗೂ ಸೆಕ್ಟರ್ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ತಂಡದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಪಡೆದರು.
ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದಾಖಲಾಗುವ ದೂರುಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥ ಪಡಿಸಬೇಕು. ಜನರು ಸ್ವಯಂ ಪ್ರೇರಿತವಾಗಿ ಬಂದು ಮತ ಚಲಾಯಿಸಲು ಎಲ್ಲಾ ಮತಗಟ್ಟೆಗಳಲ್ಲಿ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸಬೇಕು. ತಾಪಮಾನ ಹೆಚ್ಚಾಗಿರುವುದರಿಂದ ಮತಗಟ್ಟೆಗಳಲ್ಲಿ ಮತದಾರರಿಗೆ ನೆರಳಿನ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಹಾಯಕ ಚುನಾವಣಾ ಅಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಶ್ರೀನಿವಾಸ್ ಮಾತನಾಡಿ, ತಾಲೂಕಿನಲ್ಲಿ ಚುನಾವಣೆಗೆ ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಪ್ರತಿಶತ ಮತದಾನದ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.
ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಸ್ವೀಪ್ ಸಮೀತಿ ಅಧ್ಯಕ್ಷ ಮುನಿರಾಜು ಮಾತನಾಡಿ, ಸ್ವೀಪ್ ಅಡಿಯಲ್ಲಿ ಯುವಕರು, ಮಹಿಳೆಯರು, ವಿಶೇಷಚೇತನರು ಹಾಗೂ ಎಲ್ಲಾ ವರ್ಗದ ಕಾರ್ಮಿಕರು ತಪ್ಪದೇ ಮತ ಚಲಾಯಿಸುವಂತೆ ಮಾಡಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಪ್ರತಿ ಮತಗಟ್ಟೆಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಎಲ್ಲರೂ ಮತ ಚಲಾಯಿಸುವಂತೆ ಪ್ರೇರೇಪಣೆ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ತಹಸಿಲ್ದಾರ್ ವಿದ್ಯಾ ವಿಭಾ ರಾಥೋಡ್, ಡವೈಎಸ್ಪಿ ರವಿ, ಪೌರಾಯುಕ್ತ ಪರಮೇಶ್, ಸಹಾಯಕ ನಿರ್ದೇಶಕರಾದ ಕುಮಾರ್ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು..
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....
Latest News
crime
crime
crime
crime
politics
crime
others
crime
others
others
crime
others
others
others
others
crime
education
crime
crime
others
crime
education
others
others
crime
economy
crime
sports
others
crime