ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣ..!
ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣ..!

ಹೊಸಕೋಟೆ, (ಮಾ.03): ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಕರಿಬೀರನ ಹೊಸಹಳ್ಳಿಯಲ್ಲಿ ಸಂಭವಿಸಿದೆ.

ಮೃತರನ್ನು ಮರಿಯಪ್ಪ (70 ವರ್ಷ), ಮುನಿಯಮ್ಮ (60 ವರ್ಷ) ಹಾಗೂ ಭಾರತಿ (40 ಭಾರತಿ) ಎಂದು ಗುರುತಿಸಲಾಗಿದೆ.

ಬುದ್ದಿಮಾಂದ್ಯಳಾಗಿದ್ದ ಮಗಳ ಕೈತೊಳೆಯಲು ಹೋಗಿ ನೀರಿಗೆ ಬಿದ್ದಿದ್ದು, ಆಕೆಯ ರಕ್ಷಣೆಗೆ ಮುಂದಾದ ಗಂಡ-ಹೆಂಡತಿ ನೀರುಪಾಲಾಗಿರಬಹುದೆಂದು ಶಂಕಿಸಲಾಗಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಮೃತ ದೇಹಗಳನ್ನು ಹೊರತೆಗೆದಿದ್ದಾರೆ.

ಈ ವಿಷಯ ತಿಳಿದು ಸ್ಥಳಕ್ಕೆ ಹೊಸಕೋಟೆ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....