ಇಂದಿನಿಂದ BJP ಸಂಕಲ್ಪ ಪತ್ರ ಜನಾಭಿಪ್ರಾಯ ಸಂಗ್ರಹಣಾ ಅಭಿಯಾನ
ಇಂದಿನಿಂದ BJP ಸಂಕಲ್ಪ ಪತ್ರ ಜನಾಭಿಪ್ರಾಯ ಸಂಗ್ರಹಣಾ ಅಭಿಯಾನ

ಬೆಂಗಳೂರು, (ಮಾ.03); ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಣಾಳಿಕೆ ಬದಲು ಸಂಕಲ್ಪ ಪತ್ರ ಮೂಲಕ ಚುನಾವಣೆ ಎದುರಿಸಲು ನಿರ್ಧರಿಸಿದ್ದು ಹೀಗಾಗಿ ರಾಜ್ಯದಿಂದ 3 ಲಕ್ಷ ಜನರ ಅಭಿಪ್ರಾಯ ಸಂಗ್ರಹಿಸುವ ಗುರಿ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಂಕಲ್ಪ ಪತ್ರ ಜನಾಭಿಪ್ರಾಯ ಸಂಗ್ರಹಣಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ಒಂದು ಕೋಟಿ ಜನರ ಅಭಿಪ್ರಾಯ ಸಂಗ್ರಹಿಸುವ ಗುರಿಯಿದ್ದು ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸಲಹಾ ಪೆಟ್ಟಿಗೆ ಇಡಲಾಗುವುದು, ಜೊತೆಗೆ 909090-2124 ಗೆ ಅಭಿಪ್ರಾಯವನ್ನೂ ಕಳುಹಿಸಬಹುದು ಹಾಗೇ ನಮೋ ಆಪ್ ಮೂಲಕವೂ ಅಭಿಪ್ರಾಯ ನೀಡಬಹುದು ಎಂದು ಅವರು ಹೇಳಿದರು.

ಕರ್ನಾಟಕದಲ್ಲಿ ಇಂದಿನಿಂದ (ಮಾ.3) ರಿಂದ 15ರ ತನಕ ಜನಾಭಿಪ್ರಾಯ ಸಂಗ್ರಹ ನಡೆಯಲಿದ್ದು' ವಿಕಸಿತ ಭಾರತ -ಇದು ಮೋದಿ ಗ್ಯಾರೆಂಟಿ' ವಿಷಯದ ಬಗ್ಗೆ ವಿಡಿಯೋ ವ್ಯಾನ್ ಹಾಗೂ ಸಲಹೆ ಪೆಟ್ಟಿಗೆಗಳು ಸಂಚರಿಸಲಿವೆ. ಈ ಮೂಲಕ ಮುಂದಿನ 5 ವರ್ಷಗಳ ಗುರಿಯ ಕುರಿತು ಅಭಿಪ್ರಾಯ ಸಂಗ್ರಹ ಹಾಗೂ ಆಶೀರ್ವಾದ ಪಡೆಯಲಿದ್ದೇವೆ ಎಂದು ಹೇಳಿದರು.

2014, 2019ರ ಅವಧಿಯಲ್ಲಿ ಬಿಜೆಪಿ ನೀಡಿದ ಬಹುತೇಕ ಭರವಸೆಗಳನ್ನು ಈಡೇರಿಸಲಾಗಿದೆ, 2047ರಲ್ಲಿ ನಮ್ಮ ಭಾರತ ವಿಕಸಿತ ಭಾರತ ಎಂಬ ಸಂಕಲ್ಪವನ್ನು ಪ್ರಧಾಣಿ ಮೋದಿ ಮುಂದಿಟ್ಟಿದ್ದು ಈ ಯೋಜನೆ ಸಾಕಾರಗೊಳಿಸುವಲ್ಲಿ ಕೆಲಸ ಮಾಡಲಿದ್ದೇವೆ ಎಂದು ಈ ವೇಳೆ ವಿಜಯೇಂದ್ರ ಹೇಳಿದರು.

ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಚುನಾವಣಾ ಉಸ್ತುವಾರಿಗಳಾದ ರಾಧಾ ಮೋಹನ್ ದಾಸ್ ಅಗರ್ವಾಲ್, ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್, ಪ್ರಕೋಷ್ಠಕಗಳ ರಾಜ್ಯ ಸಂಯೋಜಕಿ ಎಸ್ ದತ್ತಾತ್ರಿ, ಪ್ರಣಾಳಿಕೆ ಸಮಿತಿ ಸದಸ್ಯರಾದ ಡಾ.ಸಿ ಸೋಮಶೇಖರ್ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....