ಆಕಸ್ಮಿಕ ಬೆಂಕಿ; ಹತ್ತಕ್ಕೂ ಹೆಚ್ಚು ಗುಡಿಸಲುಗಳು ಭಸ್ಮ..!
ಆಕಸ್ಮಿಕ ಬೆಂಕಿ; ಹತ್ತಕ್ಕೂ ಹೆಚ್ಚು ಗುಡಿಸಲುಗಳು ಭಸ್ಮ..!

ಕೊರಟಗೆರೆ, (ಏ.27); ಆಕಸ್ಮಿಕ ಬೆಂಕಿ ತಗಲಿ 10 ಗುಡಿಸಲುಗಳು ಭಸ್ಮವಾಗಿದ್ದು, ದವಸ, ಧಾನ್ಯ ಸೇರಿ ಹಲವು ವಸ್ತುಗಳು ಸಂಪೂರ್ಣ ಕರಕಲಾಗಿರುವ ಘಟನೆ ಚಿಂಪುಗಾನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಂಪುಗಾನ ಹಳ್ಳಿ ಗ್ರಾಮದ ಹೊರ ವಲಯದಲ್ಲಿದ್ದ 10 ಗುಡಿಸಲುಗಳಿಗೆ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿವೆ.

ಗುಡಿಸಲಿನಲ್ಲಿದ್ದ ಹಣ, ಒಡವೆ, ದವಸ- ಧಾನ್ಯ, ಬಟ್ಟೆ, ಪುಸ್ತಕ, ಅಗತ್ಯ ವಸ್ತುಗಳು ಸೇರಿ ಸುಮಾರು 30 ಲಕ್ಷಕ್ಕೂ ಹೆಚ್ಚು ಮೌಲ್ಯದ ಸಾಮಗ್ರಿಗಳು ಸುಟ್ಟು ಭಸ್ಮವಾಗಿವೆ.

ಲೋಕಾಸಭಾ ಚುನಾವಣೆ ಹಿನ್ನೆಲೆ ಮನೆಯ ಎಲ್ಲರೂ ಮತದಾನ ಮಾಡಲು ಚಿಂಪುಗಾನಹಳ್ಳಿ ಗ್ರಾಮಕ್ಕೆ ಹೋಗಿದ್ದಾಗ ಈ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಗುಡಿಸಲಿನಲ್ಲಿದ್ದ ಗ್ಯಾಸ್ ಸಿಲಿಂಡರ್‌ಗಳು ಸ್ಪೋಟಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಅಧಿ ಕಾರಿಗಳು ಬೆಂಕಿಯನ್ನು ನಂದಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಈ ಅವಘಡದ ಬಗ್ಗೆ ಮಾಹಿತಿ ಪಡೆದು ಕೊಂಡಿದ್ದು, ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಸ್ಥಳೀಯ ನಿವಾಸಿ ರಂಗಮ್ಮ ಮಾತನಾಡಿ, ಸುಮಾರು 20 ವರ್ಷಗಳಿಂದ ನಾವು ಇಲ್ಲಿಯೇ ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದು, ಗುಡಿ ಸಲಲ್ಲಿದ್ದ 40 ಮೇಕೆಗಳು ಸುಟ್ಟು ಹೋಗಿವೆ, ನಮಗೆ ದಿಕ್ಕೇ ತೋಚದಂತಾಗಿದೆ ಎಂದು ಅಳಲು ತೋಡಿ ಕೊಂಡರು.

ದಿನಸಿ ಕಿಟ್ ವಿತರಣೆ: ಚಿಂಪುಗಾನಹಳ್ಳಿ ಗ್ರಾಮ ದಲ್ಲಿ 10ಕ್ಕೂ ಹೆಚ್ಚಿನ ಕುಟುಂಬಗಳಿರುವ ಗುಡಿಸಿಲಿನ ಮನೆಗಳಿಗೆ ಬೆಂಕಿ ಬಿದ್ದಿರುವ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಬಿಜೆಪಿ ಮುಖಂಡ ಅನಿಲ್‌ಕುಮಾ‌ರ್, ಬಡ ಕುಟುಂಬಗಳಿಗೆ ಸಾಂತ್ವನ ಹೇಳಿ ದಿನಸಿ ಕಿಟ್‌ಗಳನ್ನು ವಿತರಿಸಿದರು, ಗ್ರಾಪಂ ಅಧಿಕಾರಿಗಳಿಗೆ ಶೀಘ್ರವೇ ನಿವೇಶನದ ವ್ಯವಸ್ಥೆ ನೀಡುವಂತೆ ತಿಳಿಸಿದರು. 

ಸ್ಥಳಕ್ಕೆ ಸಿಪಿಐ ಅನಿಲ್, ಇಒ ಅಪೂರ್ವ ಅನಂತರಾಮು, ಬಿಜೆಪಿ ಮುಖಂಡ ಅನಿಲ್‌ಕುಮಾ‌ರ್, ಮಂಡಲ ಅಧ್ಯಕ್ಷ ಡಾ.ಕೆ.ಎಲ್‌. ದರ್ಶನ್, ಸ್ವಾಮಿ, ಗ್ರಾಪಂ ಅಧ್ಯಕ್ಷ ನಾಗರಾಜು, ಬೆಸ್ಕಾಂ ಎಇಇ ಪ್ರಸನ್ನಕುಮಾರ್, ಯೋಗೀಶ್ ಇತರರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

politics

HL

crime

HL

literature

HL

politics

HL

crime

HL

crime

HL

crime

HL

crime

HL

crime

HL

crime

HL

politics

HL

literature

HL

literature

HL

literature

HL

education

HL

education

HL

crime

HL

politics

HL

crime

HL

health

HL

agriculture

HL

politics

HL

literature

HL

literature

HL

literature

HL

literature

HL

politics

HL

politics

HL

crime

HL

politics